ಆಷಾಢದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಭಕ್ತರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

*ಆಷಾಢ ಮಾಸದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ
* ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಹೊಸ ನಿಯಮ
* ಭಕ್ತರಿಗೆ ಕೋವಿಡ್ ಎರಡನೇ ಡೋಸ್, ನೆಗೆಟಿವ್ ವರದಿ ಕಡ್ಡಾಯ

Mysuru chamundeshwari Ashadha Pooja covid 2nd dose and negative report Must For devotees rbj

ಮೈಸೂರು, (ಜೂನ್.22): ಆಷಾಢ ಮಾಸದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬರುವ ಭಕ್ತರಿಗೆ ಎರಡು ಡೋಸ್ ಕಡ್ಡಾಯ ಮಾಡಲಾಗಿದೆ. ಈಗಂತ  ಮೈಸೂರು ಉಸ್ತುವಾರಿ ಸಚಿವ ಎಸ್ .ಟಿ.ಸೋಮಶೇಖರ್ ಹೇಳಿದ್ದಾರೆ. 

ಇಂದು(ಬುಧವಾರ) ಮೈಸೂರಿನಲ್ಲಿ ಯೋಗ ಕಾರ್ಯಕ್ರಮದ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ನಾದದೇವತೆ ಚಾಮುಂಡೇಶ್ವರಿ ತಾಯಿಗೆ ಆಷಾಧ ಮಾಸದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೋನಾ ಎರಡನೇ ಡೋಸ್ ಪಡೆದಿರುವ ಜೊತೆಗೆ ಕೋವಿಡ್ ನೆಗೆಟಿವ್ ಸರ್ಟೀಫಿಕ್ ತರುವುದು ಕಡ್ಡಾಯ ಎಂದು ಹೇಳಿದರು.

ಪ್ರತಿ ವರ್ಷ ಆಷಾಢದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತೆ. ಆದ್ರೆ, ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಲೀಮದ ಅಷಾಢ ಮಾಸದ ವಿಶೇಷ ಪೂಜೆ ಇದ್ದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಆಷಾಢದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪೂಜೆಗೆ ಆಗಮಿಸುವ ಸಾಧ್ಯತೆಗಳು ಹೆಚ್ಚಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಗೂ ಕೋವಿಡ್ ನೆಗೆಟಿವ್ ವರದಿ ಪ್ರತಿ ಕಡ್ಡಾಯ ಮಾಡಲಾಗಿದೆ.

Latest Videos
Follow Us:
Download App:
  • android
  • ios