ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಅ.14 ರಿಂದ ಮೂರು ದಿನ ಕಾಲ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಮೈಸೂರು (ಅ. 15):  ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಅ.14ರಿಂದ ಮೂರು ದಿನ ಕಾಲ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಚಾಮುಂಡಿಬೆಟ್ಟಪ್ರವೇಶವನ್ನು ಅ.14 ರಿಂದ ಹಾಗೂ ಮೈಸೂರು ಅರಮನೆ, ಮೃಗಾಲಯ, ನಂಜನಗೂಡು ನಂಜುಂಡೇಶ್ವರ ದೇವಾಲಯದ ಪ್ರವೇಶವನ್ನು ಅ.17 ರಿಂದ ನ.1 ರವರೆಗೆ ನಿರ್ಬಂಧಿಸಲಾಗಿದೆ.

ಕೆಆರ್‌ಎಸ್‌, ರಂಗನತಿಟ್ಟು ಪಕ್ಷಿಧಾಮ, ಶ್ರೀರಂಗಪಟ್ಟಣ, ನಿಮಿಷಾಂಭಕ್ಕೂ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ದಸರಾ ಸಂದರ್ಭದಲ್ಲಿ ಪ್ರವಾಸಿಗರು ಆಗಮಿಸದಂತೆ ಕೋರಿದ್ದಾರೆ.