ಮೈಸೂರು, (ಮೇ.15): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದ್ರೆ, ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಮಾತ್ರ ನೆಗೆಟಿವ್ ವರದಿ ಬಂದಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿ ಎಲ್ಲರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕುಟುಂಬಸ್ಥರಿಗೆಲ್ಲ ಪಾಸಿಟಿವ್ ಆಗಿದ್ದರಿಂದ ಡಿಸಿ ರೋಹಿಣಿ ಸಹ ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಆದ್ರೆ, ಅವರ ವರದಿ ನೆಗೆಟಿವ್ ಅಂತ ಬಂದಿದೆ. 

ಈ ಟೈಮಲ್ಲಿ ಮೋಜು-ಮಸ್ತಿ ಬೇಕಿತ್ತಾ : DC ರೋಹಿಣಿ ವಿರುದ್ಧ ಮತ್ತೊಂದು ಆರೋಪ

ಮುಂಜಾಗ್ರತೆ ವಹಿಸಿದ ಕಾರಣ ಕುಟುಂಬಸ್ಥರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಎಲ್ಲರೂ ಹೋಮ್ ಐಸೋಲೇಶನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕುಟುಂಬಸ್ಥರಿಗೆ ಸೋಂಕು ಅಟ್ಯಾಕ್ ಆದರೂ ಧೃತಿಗೆಡದೆ ರೋಹಿಣಿ ಸಿಂಧೂರಿ ಅವರು ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಹೋರಾಡುತ್ತಿದ್ದಾರೆ .

ಇನ್ನು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೂ ಕೊರೋನಾ ದೃಢಪಟ್ಟಿದ್ದು, ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.