Asianet Suvarna News Asianet Suvarna News

'ನಾನು ಕೊಚ್ಚೆಗೆ ಕಲ್ಲು ಹಾಕುವುದಿಲ್ಲ' ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು!

ನನ್ನ ತಮ್ಮನ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಸತ್ಯ ಹೇಳಿದ್ದರು. ಅದಕ್ಕಾಗಿ ನಾನು ಧನ್ಯವಾದ, ಕೃತಜ್ಞತೆ ಸಲ್ಲಿಸಲು ಅವರ ನಿವಾಸಕ್ಕೆ ಹೋಗಿದ್ದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Mysuru MP Pratap simha reaction about ayodhya rammandir inauguration at mysuru rav
Author
First Published Jan 13, 2024, 1:08 PM IST

ಮೈಸೂರು (ಜ.13): ನನ್ನ ತಮ್ಮನ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಸತ್ಯ ಹೇಳಿದ್ದರು. ಅದಕ್ಕಾಗಿ ನಾನು ಧನ್ಯವಾದ, ಕೃತಜ್ಞತೆ ಸಲ್ಲಿಸಲು ಅವರ ನಿವಾಸಕ್ಕೆ ಹೋಗಿದ್ದೆ ಎಂದು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಮೋದಿ ಅವರ ಬಗ್ಗೆ ಪ್ರೀತಿ, ಅಭಿಮಾನ ಇರುವವರು ಎಲ್ಲ ಪಕ್ಷಗಳಲ್ಲೂ ಇದ್ದಾರೆ. ನಾನು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದಾಗ ಅವರೆಲ್ಲರೂ ನನಗೆ ಮತ ನೀಡಿದ್ದಾರೆ ಎಂದರು.

ನಿನ್ನೆ ಸಚಿವ ಸಂತೋಷ್ ಲಾಡ್ ಕನಸಲ್ಲಿ ಶ್ರೀರಾಮ ಬಂದಿದ್ದರಂತೆ! ಕನಸಲ್ಲಿ ಹೇಳಿದ್ದೇನು?

ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಅಡ್ವಾಣಿ, ಕೋರ್ಟ್ ನಲ್ಲಿ ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್ ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ನರೇಂದ್ರ ಮೋದಿಯವರು. ಅಡ್ವಾಣಿಯಿಂದ ಪ್ರಧಾನಿ ನರೇಂದ್ರ ಮೋದಿಯವರೆಗೆ ರಾಮಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ಆದರೆ ರಾಮಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ನದು ಎಳ್ಳುಕಾಳಿನಷ್ಟು ಪಾತ್ರವಿಲ್ಲ. ಈ ಬಗ್ಗೆ ಅವರಿಗೆ ಅಪರಾಧಿ ಪ್ರಜ್ಞೆ ಇದೆ.  ಅಪರಾಧಿ ಪ್ರಜ್ಞೆ ಕಾರಣ ಅವರು ಉದ್ಘಾಟನೆಯಿಂದ ಹಿಂದೆ ಸರಿದಿದ್ದಾರೆ. ರಾಮನ ಅಸ್ತಿತ್ವವನ್ನೆ ಪ್ರಶ್ನೆ ಮಾಡಿದ ಕಾಂಗ್ರೆಸ್ಸಿನ  ಪಾಪ ತೊಳೆದುಕೊಳ್ಳಲು ಸಿದ್ದರಾಮಯ್ಯ ಅವರು ತಮ್ಮ ಶಿಷ್ಯರ ಜೊತೆ ಅಯೋಧ್ಯೆ ಗೆ ಹೋಗಿ ಬರಲಿ ಎಂದು ತಿವಿದರು.

ಮೋದಿ ಹೆಸರಿನ ಮುಂದೆ ಯಾವ ಎದುರಾಳಿ ಆಟ ನಡೆಯಲ್ಲ:

ಇನ್ನು ಯತೀಂದ್ರ ಸಿದ್ದರಾಮಯ್ಯ ತಮ್ಮ ಎದುರಾಳಿಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ನಾನು ಯಾವತ್ತೂ ನನ್ನ ಎದುರಾಳಿಯನ್ನು ನೋಡಲ್ಲ. ಮೋದಿ ಅವರ ಹೆಸರಿನ ಮುಂದೆ ಯಾವ ಎದುರಾಳಿ ಹೆಸರು ನಡೆಯಲ್ಲ. ಕಾಂಗ್ರೆಸ್ ಗೆ ನಮ್ಮ ಚಿಂತೆ ಯಾಕೆ? ಕಾಂಗ್ರೆಸ್ ಗೆ ಊರ ಉಸಾಬರಿ ಯಾಕೆ? ತಮ್ಮ ಅಭ್ಯರ್ಥಿ ಯಾರು ಎಂಬುದನ್ನು ನೋಡಿಕೊಳ್ಳಲಿ. ಲೋಕಸಭೆಗೆ ಅಭ್ಯರ್ಥಿಗಳು ಇಲ್ಲದೆ ಮಂತ್ರಿಗಳನ್ನೇ ನಿಲ್ಲಿಸುವಂಥ ದೈನೇಸಿ ಸ್ಥಿತಿಗೆ ಕಾಂಗ್ರೆಸ್ ಗೆ ಬಂದಿದೆ ಎಂದು ಲೇವಡಿ ಮಾಡಿದರು.

ಯತೀಂದ್ರ ಎದುರಾಳಿ ಆದರೆ ಒಳ್ಳೆಯದು:

ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಗೊಂದಲ ಇಲ್ಲ. ಈ ಕ್ಷೇತ್ರದಲ್ಲಿ ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ. ಯತೀಂದ್ರ ಸಿದ್ದರಾಮಯ್ಯ ತಮ್ಮ ಎದುರಾಳಿಯಾದರೆ ಒಳ್ಳೆಯದು. ಯತೀಂದ್ರ ಸಿದ್ದರಾಮಯ್ಯ ಸನ್ ಆಫ್  ಸಿದ್ದರಾಮಯ್ಯ ವರ್ಸಸ್ ಪತ್ರಕರ್ತ ಪ್ರತಾಪ್ ಸಿಂಹ ನಡುವೆ ಫೈಟ್ ನಡೆಯುತ್ತೆ ಎಂದರು.

ಕುಮಾರಸ್ವಾಮಿ ಭೇಟಿಯಾದ ಬಿಜೆಪಿ ನಾಯಕರು: ಕಾಲು ಮುಟ್ಟಿ ಎಚ್‌ಡಿಕೆ ಆಶೀರ್ವಾದ ಪಡೆದ ಪ್ರತಾಪ್ ಸಿಂಹ

ನಾನು ಕೊಚ್ಚೆಗೆ ಕಲ್ಲು ಹಾಕಲ್ಲ:

ಇನ್ನು ಪ್ರತಾಪ್ ಸಿಂಹರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಹೇಳಿಕೆ ವಿಚಾರಕ್ಕೆ ಸಂಬಂಧ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾನು ಯಾವತ್ತೂ ಕೊಚ್ಚೆಗೆ ಕಲ್ಲು ಹಾಕುವ ಕೆಲಸ ಮಾಡಲ್ಲ. ತಿಳಿಗೇಡಿಗಳು ಮಾತ್ರ ಕೊಚ್ಚೆಗೆ ಕಲ್ಲು ಹಾಕುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಪ್ರದೀಪ್ ಈಶ್ವರ್ ರನ್ನು ಕೊಚ್ಚೆಗೆ ಹೋಲಿಸಿ ತಿರುಗೇಟು ನೀಡಿದರು.

Follow Us:
Download App:
  • android
  • ios