ಮುಡಾ ಹಗರಣಕ್ಕೆ ಅಧ್ಯಕ್ಷ ಮರಿಗೌಡ ತಲೆದಂಡ: ಸರ್ಕಾರದಿಂದ ಶೀಘ್ರ ಆಡಳಿತಾಧಿಕಾರಿ ನೇಮಕ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರನ್ನು ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯುತ್ತಿದೆ.

Mysuru Muda scam President Marigowda resignation Karnataka Govt appoints an administrator sat

ಬೆಂಗಳೂರು (ಅ.15): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ ಟ14 ಸೈಟುಗಳ ಹಂಚಿಕೆಯ ಹಗರಣ ಆರೋಪ ದೊಡ್ಡ ಮಟ್ಟದಲ್ಲಿ ವ್ಯಾಪಿಸಿದೆ. ಇದರ ಬೆನ್ನಲ್ಲಿಯೇ ಮುಡಾ ಅಧ್ಯಕ್ಷ ಮರಿಗೌಡ ಅವರನ್ನು ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶೀಘ್ರವೇ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಲಾಗುತ್ತದೆ.

ಹೌದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ‌ ಮಾಡಲು ತಿರ್ಮಾನ ಮಾಡಲಾಗಿದೆ. ಇನ್ನು ಸರ್ಕಾರದಿಂದ ಆಡಳಿತಾಧಿಕಾರಿ ನೇಮಕ‌ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷರಿಗೆ ರಾಜೀನಾಮೆ ನೀಡಲು ನಿರ್ದೇಶನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಮರಿಗೌಡ ಅವರು ಯಾವುದೇ ಕ್ಷಣದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ಇದಾದ ಮರು ಕ್ಷಣವೇ ಸರ್ಕಾರದಿಂದ ಆಡಳಿತಾಧಿಕಾರಿಯನ್ನು ನಿಯೋಜನೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗುತ್ತದೆ.

ಇದನ್ನು ಓದಿ: ಮುಸ್ಲಿಮರನ್ನು ವಿರೋಧಿಸುವ ಬಿಜೆಪಿ, ಆರ್‌ಎಸ್‌ಎಸ್‌ನವರೇ ನಿಜವಾದ ಭಯೋತ್ಪಾದಕರು: ಎಂ.ಲಕ್ಷ್ಮಣ್!

ಈಗಾಗಲೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯದಿಂದ (ಇಡಿ) ತನಿಖೆ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡಲಾಗುತ್ತಿದೆ. ಇನ್ನು ಮುಡಾ ಹಾಲಿ ಅಧ್ಯಕ್ಷ ಮರಿಗೌಡ ಅವರೇ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪಗಳು ಬರಲು ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಮುಡಾ ಅಧ್ಯಕ್ಷ ಮರಿಗೌಡ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೆಲವು ಗುರುತರ ಆರೋಪಗಳು ಕೂಡ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ನಿರ್ಧಾರ ಮಾಡಲಾಗಿದೆ.

ಮೈಸೂರಿನ ಸ್ಥಳೀಯ ಕಾಂಗ್ರೆಸ್ ನಾಯಕರಿಂದ ಮರಿಗೌಡ ಅವರು ಮುಡಾ ಅಧ್ಯಕ್ಷರಾಗಿ ಮುಂದುವರೆಯುದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮರಿಗೌಡ ಅವರನ್ನು ಬದಲಾವಣೆ ಮಾಡಬೇಕು ಎಂದು ಒತ್ತಾಯ ಮಾಡಿದ್ದರು. ಇತ್ತೀಚೆಗೆ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಿದ್ದ ವೇಳೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲಿಯೇ ಮುಡಾ ಅಧ್ಯಕ್ಷ ಮರಿಗೌಡ ಅವರನ್ನು ಸ್ಥಾನದಿಂದ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ಇದನ್ನೂ ಓದಿ: ಸಿಗರೇಟ್ ಸೇದುವುದನ್ನು ಬಿಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ!

ದಸರಾ ಮುನ್ನವೇ ರಾಜೀನಾಮೆ ಕೇಳಿದ್ದ ಸಿದ್ದರಾಮಯ್ಯ: ಮೈಸೂರಿನ ಮುಡಾದಲ್ಲಿ ಸೈಟು ಹಂಚಿಕೆ, ಆಯುಕ್ತರ ನಡುವೆ ಗೊಂದಲದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಮಾಹಿತಿಯನ್ನು ನೀಡದೇ ಕೇವಲ ಪತ್ರ ವ್ಯವಹಾರ ಮಾಡುತ್ತಾ ಸರ್ಕಾರದ ದಿಕ್ಕು ತಪ್ಪಿಸಿ ಕಾಂಗ್ರೆಸ್ ಸರ್ಕಾರವನ್ನೇ ಅಲಿಗಾಡಿಸುವ ಹಂತಕ್ಕೆ ಕೊಂಡೊಯ್ದಿದ್ದಾರೆ. ಮರಿಗೌಡ ಅವರ ನಿರ್ಲಕ್ಷ್ಯದಿಂದಲೇ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿಗೆ ಕಂಟಕ ಬಂದಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದರು. ಇದರ ಬೆನ್ನಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ದಸರಾ ಹಬ್ಬಕ್ಕೂ ಮುನ್ನವೇ ಸೂಚನೆ ನೀಡಿದ್ದರು. ಆದರೆ, ಈ ಬಗ್ಗೆ ಮುಡಾ ಅಧ್ಯಕ್ಷ ಮರಿಗೌಡ ಅವರು ಮೈಸೂರು ದಸರಾ-2024 ಮುಗಿದ ನಂತರ ರಾಜೀನಾಮೆ ನೀಡುವುದಾಗಿ ಕೇಳಿಕೊಂಡಿದ್ದರು. ಈಗ ದಸರಾ ಮುಕ್ತಾಯದ ಬೆನ್ನಲ್ಲಿಯೇ ಮುಡಾಗೆ ಅಧ್ಯಕ್ಷರಿಂದ ರಾಜೀನಾಮೆ ಪಡೆಯುವ ಪ್ರಕ್ರಿಯೆಯನ್ನು ಸರ್ಕಾರ ಆರಂಭಿಸಿದೆ.

Latest Videos
Follow Us:
Download App:
  • android
  • ios