ಮುಸ್ಲಿಂರ ಕೈಯಿಂದ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಿ; ಇಲ್ಲದಿದ್ರೆ ನಾವೂ ಹಿಡಿಯುತ್ತೇವೆ: ಪ್ರತಾಪ್ ಸಿಂಹ
ಪೊಲೀಸರಿಗೆ ಸರ್ಕಾರ ಸ್ವತಂತ್ರವೇ ನೀಡಿಲ್ಲ. ತಮ್ಮ ತಾಲಿಬಾನ್ ಮನಸ್ಥಿತಿಯಂತೆ ಪೊಲೀಸರ ಕರ್ತವ್ಯ ನಿಯಂತ್ರಿಸುತ್ತಿದ್ದಾರೆ. ಸರ್ಕಾರ ಹೇಗೆ ಇರುತ್ತದೊ ಹಾಗೇ ಇಲಾಖೆಯೂ ಇರುತ್ತದೆ. ಆಳುವವನು ಮೊದಲು ನೆಟ್ಟಗಿರಬೇಕು. ಅವರೇ ಮುಸ್ಲಿಂ ಓಲೈಕೆಗಿಳಿದರೆ ಇಂತಹ ಸ್ಥಿತಿ ಬರುತ್ತದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದರು.
ಮೈಸೂರು (ಸೆ.14): ಮುಸ್ಲಿಮರ ಕೈಯಲ್ಲಿರುವ ಪೆಟ್ರೋಲ್ ಬಾಂಬ್, ತಲ್ವಾರ್ ಗಳನ್ನು ಸರ್ಕಾರ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದೆ ನಡೆಯುವ ಗಣೇಶ ಮೆರವಣಿಗೆಗಳಲ್ಲಿ ನಾವು ಕೈಯಲ್ಲಿ ಪೆಟ್ರೋಲ್ ಬಾಂಬ್ ಹಾಗೂ ತಲ್ವಾರ್ ಗಳನ್ನು ಹಿಡಿದುಕೊಳ್ಳಬೇಕಾಗುತ್ತದೆ. ಆಗ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಅದ್ಧೂರಿಯಾಗಿ ಗಣೇಶ ಮೆರವಣಿಗೆ ನಡೆಯುತ್ತದೆ. ಅಷ್ಟರಲ್ಲಿ ಸರ್ಕಾರ ಮುಸ್ಲಿಂ ಪುಂಡರ ಮೇಲೆ ನಿಯಂತ್ರಣ ಹೇರಬೇಕು. ನಿಯಂತ್ರಣ ಹೇರದಿದ್ದರೆ ನಮ್ಮ ರಕ್ಷಣೆಯ ಜವಾಬ್ದಾರಿ ನಮಗೆ ಗೊತ್ತಿದೆ ಎಂದು ತಿಳಿಸಿದರು.
ನಾಗಮಂಗಲ ಗಲಭೆ ಎಫ್ಐಆರ್‌ನಲ್ಲೇ ರಾಜಕಾರಣ, ಗಣೇಶ ಪ್ರತಿಷ್ಠಾಪಿಸಿದವರೇ ಎ1 ಆರೋಪಿ!
ನಾಗಮಂಗಲ ಗಲಭೆ ಪ್ರಕರಣದಲ್ಲಿ ಅಮಾಯಕ ಹಿಂದುಗಳ ಬಂಧನ ನಡೆದರೆ ನಾವು ಮತ್ತೆ ನಾಗಮಂಗಲಕ್ಕೂ ಬರುತ್ತೇವೆ, ಪೊಲೀಸ್ ಠಾಣೆಗೂ ಬರುತ್ತೇವೆ. ಗಲಾಟೆ ಶುರು ಮಾಡಿದವರ ಮೇಲೆ ಕಠಿಣ ಕ್ರಮ ಆಗಬೇಕು. ಗಲಾಟೆ ಶುರು ಮಾಡಿದವರನ್ನು ಬಿಟ್ಟು ಅದಕ್ಕೆ ಪ್ರತಿಕ್ರಿಯೆ ಕೊಟ್ಟವರ ಮೇಲೆ ಕ್ರಮ ಆದರೇ ಅದರ ಅರ್ಥ ಏನು ಎಂದು ಅವರು ಪ್ರಶ್ನಿಸಿದರು.
ಪೊಲೀಸರಿಗೆ ಸರ್ಕಾರ ಸ್ವತಂತ್ರವೇ ನೀಡಿಲ್ಲ. ತಮ್ಮ ತಾಲಿಬಾನ್ ಮನಸ್ಥಿತಿಯಂತೆ ಪೊಲೀಸರ ಕರ್ತವ್ಯ ನಿಯಂತ್ರಿಸುತ್ತಿದ್ದಾರೆ. ಸರ್ಕಾರ ಹೇಗೆ ಇರುತ್ತದೊ ಹಾಗೇ ಇಲಾಖೆಯೂ ಇರುತ್ತದೆ. ಆಳುವವನು ಮೊದಲು ನೆಟ್ಟಗಿರಬೇಕು. ಅವರೇ ಮುಸ್ಲಿಂ ಓಲೈಕೆಗಿಳಿದರೆ ಇಂತಹ ಸ್ಥಿತಿ ಬರುತ್ತದೆ ಎಂದು ಅವರು ಕಿಡಿಕಾರಿದರು.
ಭಯ ಹುಟ್ಟಿಸುತ್ತಿದೆ ಪೊಲೀಸ್ ಕಸ್ಟಡಿಯಲ್ಲಿ ಗಣೇಶ, ಕಾಂಗ್ರೆಸ್ ಸರ್ಕಾರ ವಿರುದ್ಧ ತೇಜಸ್ವಿ ಸೂರ್ಯ ಆಕ್ರೋಶ!
ಮಹಿಷಾ ದಸರಾ ಆಚರಣೆಗೆ ಬಿಡಲ್ಲ
ನಾನು ಎಂಪಿಯಾಗಿದ್ದರು ಅಷ್ಟೇ ಆಗದಿದ್ದರೆ ಅಷ್ಟೇ, ತಾಯಿ ಚಾಮುಂಡಿಗೆ ಅವಮಾನವಾಗುವುದಕ್ಕೆ ಬಿಡುವುದಿಲ್ಲ. ಬೆಟ್ಟದಲ್ಲಿ ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ. ಯಾರ ನಿಲುವುಗಳು ಏನೇ ಇರಲಿ. ನನ್ನ ನಿಲುವು ಮಾತ್ರ ಯಾವತ್ತಿಗೂ ಒಂದೇ. ಮಹಿಷಾ ದಸರಾ ನಡೆಸುವವರು ಅವರ ಮನೆಗಳಲ್ಲಿ ನಡೆಸಲಿ. ನಮಗೆ ಮಹಿಷನಂಥ ಮಕ್ಕಳೇ ಹುಟ್ಟಲ್ಲಿ ಎಂದು ದಿನವೂ ಪೂಜೆ ಮಾಡಲಿ. ಅದಕ್ಕೆ ನಮ್ಮದೇನು ವಿರೋಧ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.