ಚೈತ್ರಾ ಸುದ್ದಿಗಳಲ್ಲಿ ‘ಕುಂದಾಪುರ’ ಹೆಸರು ಬೇಡ: ಕೋರ್ಟ್‌ಗೆ ಅರ್ಜಿ
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಘಾಸಿಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.
ಬೆಂಗಳೂರು(ಸೆ.24): ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ರು. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ದಾವೆ ಹೂಡಿದ್ದಾರೆ.
ಈ ಸಂಬಂಧ ಬೆಂಗಳೂರಿನ ಬಸವನಗುಡಿಯಲ್ಲಿ "ಕಾಫಿ ಶಾಪ್" ಹೋಟೆಲ್ ಮಾಲೀಕರು ಆದ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಅಸಲು ದಾವೆ ಹೂಡಿದ್ದಾರೆ. ದಾವೆಯು ಇನ್ನಷ್ಟೇ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ.
ವಂಚನೆ ಆರೋಪದಲ್ಲಿ ಚೈತ್ರಾ ಹಾಗೂ ಇತರೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೈತ್ರ ಸಹ ಕುಂದಾಪುರದ ಮೂಲದವರಾಗಿದ್ದಾರೆ. ಆದರೆ, ಈ ವಂಚನೆ ಪ್ರಕರಣಕ್ಕೆ ಮಾಧ್ಯಮಗಳು ಚೈತ್ರ ಹೆಸರು ಬಳುಸುವಾಗ ಕುಂದಾಪುರ ಎಂಬುದಾಗಿ ಉಲ್ಲೇಖಿಸುತ್ತಿವೆ. ಇದರಿಂದ ಕುಂದಾಪುರ ಪಟ್ಟಣದ ಹೆಸರು ಮತ್ತು ಘನತೆಗೆ ಘಾಸಿಯಾಗುತ್ತಿದೆ. ಕುಂದಾಪುರ ಎಂದು ಉಲ್ಲೇಖಿಸಿ ಮಾಧ್ಯಮಗಳು ಸುದ್ದಿ ಪ್ರಕಟಿಸುವುದು ಅವಹೇಳನಕಾರಿಯಾಗಿದೆ ಎಂದು ದಾವೆಯಲ್ಲಿ ಆಕ್ಷೇಪಿಸಲಾಗಿದೆ.
ಚೈತ್ರಾ ಕುಂದಾಪುರ ನಮ್ಮವಳಲ್ಲ ಎಂದು ಕೈಬಿಟ್ಟ ವಿಶ್ವ ಹಿಂದೂ ಪರಿಷತ್
ಚೈತ್ರರನ್ನು ಬಗ್ಗೆ ಸುದ್ದಿಪ್ರಸಾರ ಮಾಡುವಾಗ ಕುಂದಾಪುರ ಎಂದು ಉಲ್ಲೇಖಿಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ಮಾಡಬೇಕು. ಈಗಾಗಲೇ ಕುಂದಾಪುರ ಹೆಸರು ಉಲ್ಲೇಖಿಸಿ ಪ್ರಸಾರ ಮಾಡಿರುವ ಸುದ್ದಿ, ವೀಡಿಯೋ, ಲೇಖನ, ಪೋಸ್ಟ್. ಲಿಂಕ್‌ಗಳನ್ನು ಶಾಶ್ವತವಾಗಿ ತೆಗೆದುಹಾಕುವಂತೆ ಸೂಚಿಸಬೇಕೆಂದು ದಾವೆದಾರ ಕೋರಿದ್ದಾರೆ. ದಾವೆದಾರ ಪರ ವಕೀಲ ಎಚ್. ಪವನ ಚಂದ್ರ ಶೆಟ್ಟಿ ವಕಾಲತ್ತು ಹಾಕಿದ್ದಾರೆ.