ತಾಂತ್ರಿಕ ದೋಷದಿಂದ ಕೆಟ್ಟು ನಿಂತ ನಮ್ಮ ಮೆಟ್ರೋ; ರೈಲಿನೊಳಗೆ ಪ್ರಯಾಣಿಕ ಪರದಾಟ!
ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರು (ಡಿ.15): ತಾಂತ್ರಿಕ ದೋಷದಿಂದ ಪೀಣ್ಯ ನಿಲ್ದಾಣದಲ್ಲಿ ಮೆಟ್ರೋ ರೈಲು ಕೆಟ್ಟು ನಿಂತಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆಗೆ ರೈಲು ಕೆಟ್ಟು ನಿಂತಿದ್ದು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸದ್ಯ ಯಶವಂತಪುರ – ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಮಾತ್ರ ಮೆಟ್ರೋ ಸಂಚಾರ ನಡೆಸುತ್ತಿದ್ದು ಪೀಣ್ಯ – ನಾಗಸಂದ್ರ ರೈಲು ಸಂಚಾರ ಸ್ಥಗಿತಗೊಂಡಿದೆ. ಮುಂದಿನ 2 ಗಂಟೆಯ ಒಳಗಡೆ ತಾಂತ್ರಿಕ ದೋಷವನ್ನು ಸರಿಪಡಿಸಲಾಗುವುದು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಚಾಲಕ ರಹಿತ ನಮ್ಮ ಮೆಟ್ರೋ ರೈಲು ಆರಂಭಕ್ಕೆ ತಯಾರಿ, ಚೀನಾದ ಎಂಜಿನೀಯರ್ಸ್‌ಗೆ ಭಾರತ ವೀಸಾ!
ಮೆಟ್ರೋ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಟವನ್ನು ಅನುಭವಿಸಿದರು. ಸದ್ಯ ಯಶವಂತಪುರ – ಸಿಲ್ಕ್ ಇನ್ಸ್ಟಿಟ್ಯೂಟ್‌ವರಗೆ ಮಾತ್ರ ಮೆಟ್ರೋ ಸಂಚಾರಿಸುತ್ತಿದೆ. ನಾಗಸಂದ್ರದಿಂದ ಯಶವಂತಪುರ ಹಾಗೂ ಯಶವಂತಪುರದಿಂದ ನಾಗಸಂದ್ರದ ಎರಡು ಕಡೆಯಿಂದಲೂ ಮೆಟ್ರೋ ರೈಲು ಸಂಚಾರವಿಲ್ಲ. ಹೀಗಾಗಿ ಮೆಟ್ರೋ ರೈಲಿಗಾಗಿ ಕಾದು ಪ್ರಯಾಣಿಕರು ಸಂಚಾರವಿಲ್ಲದೆ ವಾಪಸ್ ಆಗುತ್ತಿದ್ದಾರೆ. ಬೆಳಗ್ಗೆ 10:18ಕ್ಕೆ ರೈಲು ಹಳಿಯಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಗಂಭೀರ ಸಮಸ್ಯೆ ಏನಿಲ್ಲ ಶೀಘ್ರವೇ ಸೇವೆ ಆರಂಭಿಸುತ್ತೇವೆ ಎಂದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಸಮಸ್ಯೆ ಆಯ್ತಾ? ತುರ್ತು ಎಚ್ಚರಿಕೆ ಗಂಟೆ ಬಳಸಿ