ನಂದಿನಿ-ಅಮುಲ್‌ ಪ್ರತ್ಯೇಕ ಅಸ್ತಿತ್ವ ಹೊಂದಿರಲಿವೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕದ ನಂದಿನಿ, ಗುಜರಾತ್‌ನ ಅಮುಲ್‌ ಪ್ರತ್ಯೇಕ ಅಸ್ತಿತ್ವ  ಹೊಂದಿರುತ್ತವೆ
ಕೆಲವು ತಾಂತ್ರಿಕ ವಿಚಾರಗಳನ್ನು ಹಂಚಿಕೊಳ್ಳಲು ಅಮಿತ್‌ ಶಾ ಸಲಹೆ ನೀಡಿಕೆ
ಎರಡೂ ಸಂಸ್ಥೆ ಒಟ್ಟಾಗಿ ಕೆಲಸ ಮಾಡಿದರೆ ಲಾಭ ಹೆಚ್ಚಳ

Nandini Amul to have separate entity CM Bommai clarifies sat

ಬೆಂಗಳೂರು (ಜ.1):  ರಾಜ್ಯದ ನಂದಿನಿ ಉತ್ಪನ್ನವನ್ನು ಗುಜರಾತ್‌ನ ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆಯಾಗಿದೆ. ಕರ್ನಾಟಕ ಹಾಲು ಒಕ್ಕೂಟದ ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. 

ಇಂದು ಬೆಳಗ್ಗೆ ಆರ್.ಟಿ. ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.  ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ  ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು. 

ಒಟ್ಟಾಗಿ ಕೆಲಸ ಮಾಡಿದರೆ ಲಾಭ: ನಂದಿನಿ ಹಾಲು ಉತ್ಪನ್ನದಲ್ಲಿ ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ಅಂತಹ ವಿಚಾರಗಳನ್ನು ವಿನಿಯಮ ಮಾಡಿಕೊಳ್ಳಬಹುದು. ಕೇಂದ್ರ ಗೃಹ ಸಚುವ ಅಮಿತ್‌ ಶಾ ಅವರರು ಕೇವಲ ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.

ಕೆಎಂಎಫ್ ಸಂಸ್ಥೆಯನ್ನು ಅಮುಲ್‌ ಜೊತೆ ವಿಲೀನ ಮಾಡಲ್ಲ: ಸಿಎಂ ಬೊಮ್ಮಾಯಿ

ಕಳಸಾ ಬಂಡೂರಿ-ಲೋಪದೋಷ ಪತ್ತೆಯೇ ಕಾಂಗ್ರೆಸ್ ಮನಸ್ಥಿತಿ: ಕಳಸಾ ಬಂಡೂರಿ ಡಿಪಿಆರ್ ಕುರಿತು ಕಾಂಗ್ರೆಸ್ ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿ, ಯಾವ ವಿಷಯಕ್ಕೆ ನಾವು ಹಾಗೂ ಅವರು ಹೋರಾಟ ಮಾಡಿ ತಾರ್ಕಿಕ ಅಂತ್ಯ ದೊರೆತು ಕೆಲಸ ಮಾಡುವ ಪ್ರಸಂಗ ಬಂದಿದೆ, 25 ವರ್ಷಗಳ ಹೋರಾಟಕ್ಕೆ ವಿಜಯ ದೊರೆತಿದೆ. ಇದರಲ್ಲಿ ಲೋಪದೋಷಗಳನ್ನು ಹುಡುಕುವುದು ಕಾಂಗ್ರೆಸ್ ಮನಸ್ಥಿತಿಯನ್ನು ಅದು ತೋರಿಸುತ್ತದೆ. ಅವರ ಟೀಕೆ ಟಿಪ್ಪಣಿ  ಬಗ್ಗೆ   ತಲೆ ಕೆಡಿಸಿಕೊಂಡಿಲ್ಲ. ನಮ್ಮ ದಾರಿ ಸ್ಪಷ್ಟವಾಗಿದೆ. ಡಿಪಿಆರ್ ಆಗಿದೆ, ಆರ್ಥಿಕ ಇಲಾಖೆ ಅನುಮೋದನೆ ಪಡೆದು ಕೆಲಸ ಪ್ರಾರಂಭ ಮಾಡುತ್ತೇವೆ ಎಂದರು.

ಮೀಸಲಾತಿ-ಯಾರಿಗೂ ಅನ್ಯಾಯವಾಗುವುದಿಲ್ಲ: ಮೀಸಲಾತಿ ಬಗ್ಗೆ ಅಂತಿಮ ಆದೇಶ ಬಂದಾಗ ಎಲ್ಲವೂ ತಿಳಿಯುತ್ತದೆ.  ಮಧ್ಯಂತರ ಆದೇಶದಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದು, ಅಂಕಿಅಂಶಗಳು ಅಂತಿಮ ವರದಿಯಲ್ಲಿ ಬರುತ್ತದೆ. ಬಂದ ನಂತರ ಸಂಬಂಧಿಸಿದವರೊಂದಿಗೆ ಚರ್ಚೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಈಗಿರುವ ಹಿಂದುಳಿದ ವರ್ಗಗಳಿಗೆ ಯಾವುದೇ ತೊಂದರೆ ಮಾಡದಂತೆ ಬಹಳ ವರ್ಷಗಳಿಂದ ಶಿಕ್ಷಣ ಮತ್ತು ಉದ್ಯೋಗದ ಬಗ್ಗೆ ಹಿನ್ನೆಡೆಯಾಗಿದ್ದು, ಮಧ್ಯಂತರ ಆದೇಶವನ್ನು ಒಪ್ಪಿಕೊಂಡಿದ್ದೇವೆ. ಅಗತ್ಯ ಬಿದ್ದರೆ  ಸ್ಪಷ್ಟೀಕರಣವನ್ನೂ ನೀಡಲಾಗುವುದು. ಅಂತಿಮ ವರದಿ ಬಂದಾಗ ಎಲ್ಲವೂ ಸ್ಪಷ್ಟವಾಗುತ್ತದೆ. ಇದರಲ್ಲಿ ಯಾರಿಗೂ ಅನ್ಯಾಯ ವಾಗುವುದಿಲ್ಲ ಎಂದರು.

ಸಿದ್ದು ಕಾಲದ ಹಗರಣ ಲೋಕಾಯುಕ್ತಕ್ಕೆ: ಸಿಎಂ ಬೊಮ್ಮಾಯಿ

ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿ ಇದೆ:  ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್  ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು  ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ. ವಿರೋಧ ಪಕ್ಷದ ನಾಯಕರು ಈ ಬೇಡಿಕೆಗಳನ್ನು ತಮ್ಮ ಸರ್ಕಾರ ಇದ್ದಾಗ ಈಡೇರಿಸಲು ಸಾಧ್ಯವಾಗಿರಲಿಲ್ಲ. ನಾವು ಮಾಡುತ್ತಿರುವುದರಿಂದ ಅವರಿಗೆ ಸಮಸ್ಯೆಯಾಗಿದೆ ಸಿಎಂ ಬೊಮ್ಮಾಯಿ ಕಿಡಿಕಾರಿದರು.

Latest Videos
Follow Us:
Download App:
  • android
  • ios