2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

ನವದೆಹಲಿ (ಆ.22): 2020ರ ಸಾಲಿನ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ ಇಬ್ಬರು ಸೇರಿ ಒಟ್ಟು 47 ಮಂದಿ ಶಿಕ್ಷಕರಿಗೆ ಪ್ರಶಸ್ತಿ ಲಭಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ‘ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕ ಯಾಕೂಬ್‌.ಎಸ್‌ ಹಾಗೂ ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕಿನ ‘ಬಂದರವಾಡ ಹಿರಿಯ ಪ್ರಾಥಮಿಕ ಶಾಲೆ’ಯ ಶಿಕ್ಷಕಿ ಸುರೇಖಾ ಜಗನ್ನಾಥ್‌ ಅವರಿಗೆ ಈ ಗೌರವ ಲಭಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವಿಜೇತರನ್ನು ಆಯ್ಕೆ ಮಾಡಿದೆ.

ಸಮೀಕ್ಷೆಯಿಂದ ಬಯಲಾಯ್ತು ಆನ್‌ಲೈನ್ ಶಿಕ್ಷಣದ ಅಸಲಿ ಮುಖ: ವಿದ್ಯಾರ್ಥಿಗಳಿಗೆ ತುಂಬಲಾರದ ನಷ್ಟ!..

ದೇಶದ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶ ಹಾಗೂ ಸಂಸ್ಥೆಗಳಿಂದ ಒಟ್ಟು 153 ಶಿಕ್ಷಕರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಈ ಪೈಕಿ ಆಯ್ಕೆ ಸಮಿತಿ 47 ಶಿಕ್ಷಕರ ಹೆಸರನ್ನು ಅಂತಿಮಗೊಳಿಸಿದೆ. ಪ್ರತೀ ಬಾರಿ ಸೆ.5ರ ಶಿಕ್ಷಕರ ದಿನದಂದು ಈ ಪ್ರಶಸ್ತಿ ನೀಡಲಾಗುತ್ತಿದ್ದು, ಈ ವರ್ಷದ ಬಗ್ಗೆ ಯಾವುದೇ ಮಾಹಿತಿ ಇಲ್ಲ.