ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಸಮಾಜವನ್ನು ಬೆಚ್ಚಿಬೀಳಿಸಿದೆ: ಸುನೀಲ್ ಕುಮಾರ್‌

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬು ದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್‌ 
 

Naxal Surrender Package Shocked the Society says BJP General Secretary V Sunil Kumar

ಕಾರ್ಕಳ(ಜ.09):  ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜ ವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್‌ ಹೇಳಿದ್ದಾರೆ. 

ಈ ಕುರಿತು ಟ್ವಿಟ್ ಮಾಡಿರುವ ಅವರು, ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬು ದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ್ದಾರೆ. 

ಇವರೇ ಶಸ್ತ್ರ ಕೆಳಗಿಳಿಸಿ ಶರಣಾದ 6 ಮಂದಿ ನಕ್ಸಲೀಯರು!

ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕ್ಸಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.

ನಕ್ಸಲರ ಶರಣಾಗತಿ ಕೊನೆ ಕ್ಷಣದಲ್ಲಿ ಬೆಂಗಳೂರಿಗೆ ಶಿಫ್ಟ್‌

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಬುಧವಾರ ಬೆಳಗ್ಗೆ ಆರು ಮಂದಿ ನಕ್ಸಲರು ಶರಣಾಗುತ್ತಾರೆಂಬ ಸುದ್ದಿ ಇಡೀ ರಾಜ್ಯದ ಜನರನ್ನು ತುದಿಗಾಲ ಮೇಲೆ ನಿಲ್ಲಿಸಿತ್ತು. ಕೊಪ್ಪದ ಕಾಡಿಂದ ಹೊರಟು ಚಿಕ್ಕಮಗಳೂರು ತಲುಪಿ ಇನ್ನೇನು ಶರಣಾಗುತ್ತಾರೆನ್ನುವ ವೇಳೆ ದಿಢೀರ್ ಬೆಳವಣಿಗೆಯಲ್ಲಿ ಸಿಎಂ ಕಚೇರಿ ಫೋನ್ ಕರೆ ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗತಿಗೆ ಸೂಚಿಸಿದ್ದರಿಂದ ಇಡೀ ಪ್ರಕ್ರಿಯೆ ಕ್ಷಣಮಾತ್ರದಲ್ಲಿ ಬೆಂಗಳೂರಿಗೆ ಸ್ಥಳಾಂತರವಾಯಿತು. 

ರಾಜ್ಯದ ಮುಂಡಗಾರು ಲತಾ, ಸುಂದರಿ ಕುಟ್ಟೂರು, ವನಜಾಕ್ಷಿ ಬಾಳೆಹೊಳೆ, ಮಾರಪ್ಪ ಅರೋಲಿ, ತಮಿಳುನಾಡಿನ ಕೆ. ವಸಂತ, ಕೇರಳದ ಟಿ. ಎನ್.ಜೀಶ್ ಅಲಿಯಾಸ್ ಜಯಣ್ಣ ಶರಣಾಗತಿಗೆ ಮುಹೂರ್ತ ನಿಗದಿ ಮಾಡಲಾಗಿತ್ತು. ನಕಲೀಯರ ಕುಟುಂಬಸ್ಥರು, ಶಾಂತಿಗಾಗಿ ನಾಗರಿಕ ವೇದಿಕೆಯ ಬಿ.ಟಿ. ಲಲಿತಾ ನಾಯಕ್, ಕೆ.ಎಲ್. ಅಶೋಕ್ ಪ್ರವಾಸಿ ಮಂದಿರದಲ್ಲಿ ಕಾದು ಕುಳಿತಿದ್ದರು. 

ಶರಣಾದ ನಕ್ಸಲರ ಕುಟುಂಬಗಳಲ್ಲೀಗ ಸಂತಸ: ಕುಟುಂಬಸ್ಥರಲ್ಲಿ ಚಿಗುರೊಡೆದ ಹೊಸ ಕನಸು!

ಶರಣಾಗತಿ ನೇತೃತ್ವವಹಿಸಿದ್ದ ಶಾಂತಿಗಾಗಿ ನಾಗರಿಕ ವೇದಿಕೆ ಮುಖಂಡರಾದ ಶ್ರೀಪಾಲ್, ಬಂಜಗೆರೆ ಜಯಪ್ರಕಾಶ್, ಪಾರ್ವತೀಶ್, ಜನದನಿ ಸಂಘಟನೆ ಮುಖಂಡರಾದ ನೂರ್ ಶ್ರೀಧರ್ ಇತರರು ಬೆಳಗ್ಗೆ 8ಕ್ಕೆ ಕೊಪ್ಪ ತಾಲೂಕಿನ ಮೇಗೂರು ಗ್ರಾಮದ ಬಳಿಯಿಂದ ನಕ್ಸಲರೊಂದಿಗೆ ಚಿಕ್ಕಮಗಳೂ ರಿನತ್ತ ಪ್ರಯಾಣ ಬೆಳೆಸಿದರು. 

ಶರಣಾಗತಿ ಪ್ರಕ್ರಿಯೆ ನಡೆಸಲು ಬಿಗಿ ಭದ್ರತೆಯೊಂದಿಗೆ ಪಶ್ಚಿಮವಲಯ ಐಜಿಪಿ ಅಮಿತ್ ಸಿಂಗ್, ಎಸ್ಪಿ ಡಾ. ವಿಕ್ರಂ ಅಮಟೆ ಕಾಯ್ದು ಕುಳಿತಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಇಡೀ ಪ್ರಕ್ರಿಯೆ ಬೆಂಗಳೂರಿಗೆ ಶಿಫ್ಟ್ ಆಯಿತು.

Latest Videos
Follow Us:
Download App:
  • android
  • ios