ರಾಜ್ಯ ಸರ್ಕಾರದ ಮುಂದೆ 18 ಬೇಡಿಕೆಗಳನ್ನಿಟ್ಟ ನಕ್ಸಲರು
ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯದ ಜೈಲಿನಲ್ಲಿರುವ ನಕ್ಸಲ್ ಚಟುವಟಿಕೆಯಲ್ಲಿದ್ದರೆ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ ಬಿಡುಗಡೆ ಮಾಡಬೇಕು ಹಾಗೂ ಪುನರ್ವಸತಿ, ಸಹಾಯಧನ ನೀಡಬೇಕು ಎಂದು ನಕ್ಸಲರು ಒತ್ತಾಯಿಸಿದ್ದಾರೆ.
ಬೆಂಗಳೂರು(ಜ.09): ಶರಣಾಗಿರುವ ನಕ್ಸಲರು ಸರ್ಕಾರದ ಮುಂದೆ 18 ಅಂಶಗಳ ಹಕ್ಕೊತ್ತಾಯ ಮಂಡಿಸಿದ್ದಾರೆ. ಪ್ರಮುಖವಾಗಿ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು, ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯದ ಜೈಲಿನಲ್ಲಿರುವ ನಕ್ಸಲ್ ಚಟುವಟಿಕೆಯಲ್ಲಿದ್ದರೆ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ ಬಿಡುಗಡೆ ಮಾಡಬೇಕು ಹಾಗೂ ಪುನರ್ವಸತಿ, ಸಹಾಯಧನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು, ಕರ್ನಾಟಕ, ಕೇರಳ, ತಮಿಳುನಾಡುರಾಜ್ಯದಲ್ಲಿ ಭೂಮಿ ಇಲ್ಲದಕುಟುಂಬದವರಿಗೆ ತಲಾ 5 ಎಕರೆ ಕೃಷಿ ಯೋಗ್ಯ ಭೂಮಿ ನೀಡಬೇಕು, ಈಗಾಗಲೇ ಭೂಮಿ ಹೊಂದಿರುವವರಿಗೆ ಹಕ್ಕುಪತ್ರ ನೀಡಬೇಕು, ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು, ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಸ್ಥಗಿತಗೊಳಿಸಬೇಕು, ನಿರುದ್ಯೋಗಿ ಯುವಜನರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ, ಆದಿವಾಸಿಗಳಿಗೆ ಕಾಡಿನ ಮೇಲೆ ಎಲ್ಲ ರೀತಿಯ ಅಧಿಕಾರ ನೀಡಬೇಕು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಬೇಕು, ಕುದುರೆಮುಖ ರಾಷ್ಟ್ರೀಯ ಉದ್ಯಾನ ರದ್ದಾಗಬೇಕು ಮತ್ತು ಅಲ್ಲಿ ಜನರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು, ಬಡ ಮತ್ತು ಮಧ್ಯಮ ವರ್ಗದ ರೈತರ ಒತ್ತುವರಿ ತೆರವುಗೊಳಿಸಬಾರದು, ಅಡಕೆ ಬೆಳೆ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು ಎಂಬುದು ಸೇರಿ 18 ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ಶರಣಾದ 6 ನಕ್ಸಲರ ಪೈಕಿ ಒಬ್ಬ ರಾಯಚೂರಿನ: ಮಗನ ಆಗಮನ ನಿರೀಕ್ಷೆಯಲ್ಲಿ 80 ವರ್ಷದ ತಾಯಿ!
ನಕ್ಸಲ್ ಶರಣಾಗತಿ ಪ್ಯಾಕೇಜ್ ಸಮಾಜವನ್ನು ಬೆಚ್ಚಿಬೀಳಿಸಿದೆ: ಸುನೀಲ್ ಕುಮಾರ್
ಕಾರ್ಕಳ ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜ ವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯ ದರ್ಶಿ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.
ಶರಣಾದ ನಕ್ಸಲರ ಕುಟುಂಬಗಳಲ್ಲೀಗ ಸಂತಸ: ಕುಟುಂಬಸ್ಥರಲ್ಲಿ ಚಿಗುರೊಡೆದ ಹೊಸ ಕನಸು!
ಈ ಕುರಿತು ಟ್ವಿಟ್ ಮಾಡಿರುವ ಅವರು, ಯಾವ ಮಾನದಂಡದ ಮೇಲೆ ಸರ್ಕಾರಈ ಕ್ರಮಕ್ಕೆ ಮುಂದಾಗಿದೆ ಎಂಬು ದನ್ನು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ ಸಿಗುತ್ತದೆ ಎಂದು ಟೀಕಿಸಿದ್ದಾರೆ.
ಭೂಗತ ಚಟುವಟಿಕೆ ನಡೆಸಿ ತಲೆಮರೆಸಿಕೊಂಡಿದ್ದ ನಕಲರು ಶರಣಾಗಬೇಕಿರುವುದು ಸಂಬಂಧಪಟ್ಟ ಎಸ್ಪಿ ಕಚೇರಿ ಅಥವಾ ಸಬ್ ಇನ್ಸ್‌ಪೆಕ್ಟರ್ ಎದುರು. ಆದರೆ ಮುಖ್ಯಮಂತ್ರಿ ತಮ್ಮ ಅಧಿಕೃತ ಕಚೇರಿಯಲ್ಲಿ ನಕ್ಸಲರನ್ನು ಸ್ವಾಗತಿಸಲು ನಡು ಬಗ್ಗಿಸಿ ನಿಂತಿದ್ದಾರೆ. ಕರ್ನಾಟಕದಲ್ಲಿ ಕಾನೂನಿನ ಕೊಲೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.