Asianet Suvarna News Asianet Suvarna News

ಧಾರವಾಡದಲ್ಲಿ ಎನ್‌ಡಿಎ ಮಾದರಿಯ ತರಬೇತಿ ಕೇಂದ್ರ: ಸಿಎಂ ಬೊಮ್ಮಾಯಿ

ಪೊಲೀಸ್‌ ಅಧಿಕಾರಿಗಳಿಗೆ ಸೇನಾ ಮಾದರಿಯ ತರಬೇತಿ ನೀಡಲು ಪುಣೆಯ ಖಡಕ್‌ವಾಸ್ಲಾದ ಎನ್‌ಡಿಎ (ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ) ಮಾದರಿಯ ತರಬೇತಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಧಾರವಾಡದ ಕರ್ನಾಟಕ ಮೀಸಲು ಪೊಲೀಸ್‌ ಪಡೆಯ ಆವರಣದಲ್ಲಿ ಈ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

nda model police training will be established in dharwad assures cm basavaraj bommai gvd
Author
First Published Sep 5, 2022, 4:30 AM IST

ಹುಬ್ಬಳ್ಳಿ (ಸೆ.05): ಪೊಲೀಸ್‌ ಅಧಿಕಾರಿಗಳಿಗೆ ಸೇನಾ ಮಾದರಿಯ ತರಬೇತಿ ನೀಡಲು ಪುಣೆಯ ಖಡಕ್‌ವಾಸ್ಲಾದ ಎನ್‌ಡಿಎ (ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ) ಮಾದರಿಯ ತರಬೇತಿ ಕೇಂದ್ರ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಧಾರವಾಡದ ಕರ್ನಾಟಕ ಮೀಸಲು ಪೊಲೀಸ್‌ ಪಡೆಯ ಆವರಣದಲ್ಲಿ ಈ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್‌ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ತಂತ್ರಜ್ಞಾನಗಳು ಆವಿಷ್ಕಾರವಾದಂತೆ ಹೊಸ ಬಗೆಯ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ತಂತ್ರಜ್ಞಾನದ ದುರುಪಯೋಗ ಜೋರಾಗುತ್ತಿದೆ. ಡಿಜಿಟಲ್‌ ಹಾಗೂ ಸೈಬರ್‌ ಅಪರಾಧಗಳ ಪತ್ತೆ ಕಾರ್ಯದಲ್ಲಿ ಸುಧಾರಣೆ ತರಬೇಕಿದೆ. ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ತನಿಖೆ ಕೈಗೊಳ್ಳಲು ಪೊಲೀಸರಲ್ಲಿ ಕೌಶಲ್ಯ ಹೆಚ್ಚಿಸಬೇಕಿದೆ. ಮಧ್ಯಮ ಕ್ರಮಾಂಕದ ಪೊಲೀಸ್‌ ಅಧಿಕಾರಿಗಳಿಗೆ ತರಬೇತಿ ನೀಡಲು ಪುಣೆಯ ಖಡಕ್‌ವಾಸ್ಲಾದಲ್ಲಿ ಎನ್‌ಡಿಎ ತರಬೇತಿ ಕೇಂದ್ರವಿದೆ. ಅದೇ ಮಾದರಿಯ ತರಬೇತಿ ಕೇಂದ್ರವನ್ನು ಧಾರವಾಡದಲ್ಲಿ 50 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು ಎಂದರು.

Bengaluru Rains: ಸಿಎಂ ಸಿಟಿ ರೌಂಟ್ಸ್ ವೇಳೆ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

ಹೆಚ್ಚುತ್ತಿರುವ ಹೊಸ ಬಗೆಯ ಅಪರಾಧ ಪ್ರಕರಣಗಳನ್ನು ನಿಯಂತ್ರಿಸಲು ಭಾರತೀಯ ಸಾಕ್ಷ್ಯ ಅಧಿನಿಯಮದಲ್ಲಿ ಬದಲಾವಣೆ ತರುವ ಅಗತ್ಯವಿದೆ ಎಂದ ಅವರು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ನಾವು ಸಹ ಅದಕ್ಕೆ ಸಹಮತ ಸೂಚಿಸಿದ್ದೇವೆ. ಅಪರಾಧಕ್ಕಿಂತ ಮೊದಲು ಕಾನೂನು ಮೇಲುಗೈ ಸಾಧಿಸಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ನುಡಿದರು.

ಕಾಮಗಾರಿ ಚುರುಕುಗೊಳಿಸಿ: ಹುಬ್ಬಳ್ಳಿ- ಧಾರವಾಡ ಮಹಾನಗರದಲ್ಲಿ 24್ಡ7 ನಿರಂತರ ಕುಡಿಯುವ ನೀರು ಪೂರೈಸುವ ಯೋಜನೆಯ ಕಾಮಗಾರಿ ಚುರುಕುಗೊಳ್ಳಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಒಂದು ವೇಳೆ ಅನುಷ್ಠಾನದಲ್ಲಿ ಲೋಪ ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ರಾತ್ರಿ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಕುರಿತು ನಡೆಸಿದ ಸಭೆಯಲ್ಲಿ ಅಧಿಕಾರಿಗಳಿಗೆ ಈ ರೀತಿ ಎಚ್ಚರಿಕೆ ನೀಡಿದರು.

ಆಡಳಿತ ವ್ಯವಸ್ಥೆ, ಹಣಕಾಸು ನಿರ್ವಹಣೆಯಲ್ಲಿ ವಿಕೇಂದ್ರೀಕರಣ ಮಾಡಿ ತ್ವರಿತತೆ ತರಬೇಕು. ಇದು ಯಾವುದೇ ಕಟ್ಟಡ ಕಾಮಗಾರಿಯನ್ನು ಕೈಗೊಳ್ಳುತ್ತಿಲ್ಲ. ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರಿನ ಯೋಜನೆಯಾಗಿದೆ. ಗುತ್ತಿಗೆ ಸಂಸ್ಥೆಯು ತನ್ನ ಸಮಸ್ಯೆಗಳನ್ನು ನಿರ್ವಹಿಸಿಕೊಳ್ಳುವ ಸಾಮರ್ಥ್ಯದೊಂದಿಗೆ ಮುನ್ನಡೆಯಬೇಕು. ಜಿಲ್ಲಾಡಳಿತ, ಸರ್ಕಾರವೂ ಆ ನಿಟ್ಟಿನಲ್ಲಿ ಸಹಕರಿಸಲಿದೆ. ನಿರಂತರ ನೀರು ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಬಗೆಯ ಲೋಪದೋಷ ಸಹಿಸುವ ಪ್ರಶ್ನೆಯೇ ಇಲ್ಲ.ಅನುಷ್ಠಾನ ಅತ್ಯಂತ ತೃಪ್ತಿಕರವಾಗಿರಬೇಕು. ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಂತಹ ಕ್ರಮಗಳಿಗೆ ಅವಕಾಶ ನೀಡಬೇಡಿ ಎಂದು ಖಡಕ್‌ ಎಚ್ಚರಿಕೆ ನೀಡಿದರು.

Bengaluru News: ವಿಧಾನಸೌಧದ ಜತೆಗೆ ಲಾಲ್‌ಬಾಗ್‌ನಲ್ಲೂ ಕೆಂಪೇಗೌಡರ ಪ್ರತಿಮೆ ಸ್ಥಾಪನೆ

ಗುತ್ತಿಗೆ ಪಡೆದಿರುವ ಸಂಸ್ಥೆಯು ಸ್ಥಳೀಯ ಜನಪ್ರತಿನಿಧಿಗಳ ಸಲಹೆ, ಸಹಕಾರ ಪಡೆದು ಜಲ ಸಂಗ್ರಹಾಗಾರ ಹಾಗೂ ಕೊಳವೆ ಮಾರ್ಗ ನಿರ್ಮಿಸಬೇಕು. ನಿರ್ವಹಣೆಯ ಜವಾಬ್ದಾರಿ ತಕ್ಷಣವೇ ಸಂಸ್ಥೆಯೇ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು. ಈ ವಿಷಯದಲ್ಲಿ ಬೇಜವಾಬ್ದಾರಿ ಸಹಿಸುವುದಿಲ್ಲ ಎಂದರು. ಗುತ್ತಿಗೆ ಪಡೆದಿರುವ ಎಲ್‌ ಆ್ಯಂಡ್‌ ಟಿ ಸಂಸ್ಥೆಯು ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಗತಿ ಮಾಹಿತಿ ನೀಡಬೇಕು. ಅರ್ಪಣಾ ಮನೋಭಾವದಿಂದ ಕೆಲಸ ಮಾಡಿ ಕಾಮಗಾರಿಯಲ್ಲಿ ಗುಣಮಟ್ಟಕಾಯ್ದುಕೊಳ್ಳಬೇಕು. ಕೂಡಲೇ ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಬೇಕು ಯೋಜನೆಯ ಅನುಷ್ಠಾನಕ್ಕೆ ಇದು ಸಹಾಯವಾಗಲಿದೆ. ಕೆಯುಐಡಿಎಫ್ಸಿ ಹಾಗೂ ಎಲ್‌ ಆ್ಯಂಡ್‌ ಟಿ ಸಂಸ್ಥೆಗಳು ಜಂಟಿಯಾಗಿ ನ್ಯಾಯಾಲಯಕ್ಕೆ ಉತ್ತರ ನೀಡುವ ಮೂಲಕ ಕಾನೂನು ತೊಡಕು ಬಗೆಹರಿಸಿಕೊಳ್ಳಬೇಕು ಎಂದರು.

Follow Us:
Download App:
  • android
  • ios