Asianet Suvarna News Asianet Suvarna News

Corona Update: ಕರ್ನಾಟಕದಲ್ಲಿ ಕೊರೋನಾ ಏರಿಳಿತ, ಇಲ್ಲಿದೆ ನ.03ರ ಅಂಕಿ-ಸಂಖ್ಯೆ

* ಕರ್ನಾಟಕದಲ್ಲಿ ಕೊರೋನಾ ಏರಿಳಿತಾ
* ಹೊಸದಾಗಿ 254 ಜನರಿಗೆ ಕೊರೋನಾ ಪಾಸಿಟಿವ್
* ಮರಣ ಪ್ರಮಾಣ ಶೇ.0.78 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.33 

New 254 Coronavirus Cases and 2 Deaths In Karnataka On Nov 3rd rbj
Author
Bengaluru, First Published Nov 3, 2021, 10:40 PM IST

ಬೆಂಗಳೂರು, (ನ.03): ಕರ್ನಾಟಕದಲ್ಲಿ (Karnataka) ಇಂದು (ನ.3) ಹೊಸದಾಗಿ 254 ಜನರಿಗೆ ಕೊರೋನಾ ಪಾಸಿಟಿವ್ (Coronavius Positive) ಕೇಸ್ ಪತ್ತೆಯಾಗಿದ್ದು,  ಸೋಂಕಿನಿಂದ 2 ಜನರ ಸಾವನ್ನಪ್ಪಿದ್ದಾರೆ.

ಈ ಮೂಲಕ  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,89,014 ಕ್ಕೆ ಏರಿಕೆಯಾಗಿದ್ರೆ,  ಈವರೆಗೆ ಕೊರೋನಾದಿಂದ 38,091 ಜನ ಸಾವನ್ನಪ್ಪಿದ್ದಾರೆ.

ಕೊರೋನಾ ರೂಪಾಂತರ ತಳಿ ಆತಂಕ ಇಲ್ಲ : ಸಚಿವ ಡಾ.ಕೆ.ಸುಧಾಕರ್‌

ಸೋಂಕಿತರ ಪೈಕಿ 29,42,588 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 8,306 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕೋವಿಡ್-19 ಮರಣ ಪ್ರಮಾಣ ಶೇ.0.78 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.33 ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು(ಬುಧವಾರ) ಒಂದೇ ದಿನ 151 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಪೀಡಿತರ ಸಂಖ್ಯೆ 12,52,257 ಕ್ಕೆ ಏರಿಕೆಯಾಗಿದೆ. 12,52,257 ಸೋಂಕಿತರ ಪೈಕಿ 12,29,570 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,285 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,401 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಕೊವಿಡ್19 ಸೋಂಕಿನಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ  ಒಬ್ಬರು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಒಟ್ಟು ರಾಜ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೋನಾದಿಂದ ಸಾವು ಸಂಭವಿಸಿಲ್ಲ.

ಜಿಲ್ಲಾವಾರು ಕೊರೋನಾ ಕೇಸ್ 
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 151, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 6, ಮೈಸೂರು 19, ರಾಯಚೂರು 1, ರಾಮನಗರ 1, ಶಿವಮೊಗ್ಗ 1, ತುಮಕೂರು 11, ಉಡುಪಿ 11, ಉತ್ತರ ಕನ್ನಡ 12, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೋವ್ಯಾಕ್ಸಿನ್‌ಗೆ ಸಿಕ್ತು ಮನ್ನಣೆ 
ಬಹಳ ದಿನಗಳಿಂದ ಕಾಯುತ್ತಿದ್ದ ಭಾರತದ 'ಕೋವ್ಯಾಕ್ಸಿನ್' ಕೋವಿಡ್ ಲಸಿಕೆಗೆ ಕೊನೆಗೂ ವಿಶ್ವ ಆರೋಗ್ಯ ಸಂಸ್ಥೆ (WHO) ಮನ್ನಣೆ ನೀಡಿದ್ದು, ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ಭಾರತ್ ಬಯೋಟೆಕ್(Bharat Biotech) ನ ಕೊವ್ಯಾಕ್ಸಿನ್ (Covaxin) ಲಸಿಕೆಯನ್ನು ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (World Health Organization) ಕೊನೆಗೂ ಅನುಮೋದಿಸಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆ ತನ್ನ ಲಸಿಕೆಗಳ ತುರ್ತು ಬಳಕೆಯ ಪಟ್ಟಿ (emergency use listing - EUL)ಗೆ ಅಧಿಕೃತವಾಗಿ ಸೇರ್ಪಡೆ ಮಾಡಿದೆ. ಈ ಮೂಲಕ ಭಾರತದ ಕೋವ್ಯಾಕ್ಸಿನ್ ಲಸಿಕೆಗೆ ಜಾಗತಿಕ ಮನ್ನಣೆ ದೊರೆತಿದೆ. 

ಇತ್ತೀಚೆಗಷ್ಟೇ ಭಾರತ್ ಬಯೋಟೆಕ್‌ನ ಕೋವಿಡ್ ವಿರೋಧಿ ಲಸಿಕೆ ಕೋವಾಕ್ಸಿನ್‌ಗೆ ತುರ್ತು ಬಳಕೆಯ ಅಧಿಕಾರವನ್ನು ನೀಡುವ ಕುರಿತು ನಿರ್ಧರಿಸಲು ತಾಂತ್ರಿಕ ಸಲಹಾ ಗುಂಪು (TAG), ವಿಶ್ವ ಆರೋಗ್ಯ ಸಂಸ್ಥೆಯ (WHO) ಸ್ವತಂತ್ರ ಸಲಹಾ ಸಮಿತಿಯು ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗಾಗಿ ಅನುಮತಿಸುವ ಕುರಿತಂತೆ ಚರ್ಚೆ ನಡೆಸಲಾಗಿತ್ತು.

Follow Us:
Download App:
  • android
  • ios