ಬೆಂಗಳುರು, (ಫೆ.20): ರಾಜ್ಯದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 490 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 9,47,736 ಕ್ಕೆ ಏರಿಕೆ.

ಇಂದು (ಶನಿವಾರ) 389 ಮಂದಿ ಸೋಂಕಿನಿಂದ ಗುಣಮುಖವಾಗಿದ್ದು, ಐದು ಮಂದಿ ಬಲಿಯಾಗಿದ್ದಾರೆ ಎಂದು  ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

ಈ ಮೂಲಕ ಒಟ್ಟು 12,292 ಜನರು ಕೊರೋನಾ ಕಾರಣದಿಂದ ಸಾವನ್ನಪ್ಪಿದ್ರೆ, ಇದುವರೆಗೆ 9,29,447 ಸೋಂಕಿತರು ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ. 

ಸದ್ಯ ರಾಜ್ಯದಲ್ಲಿ 5,836 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 127 ಮಂದಿ ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೊರೋನಾ ಏನೋ ಕಡಿಮೆಯಾಗುತ್ತಿದೆ. ಆದ್ರೆ, ಇದೀಗ ಎರಡನೇ ಅಲೆ ಭೀತಿ ಶುರುವಾಗಿದೆ.

ಹೌದು...ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿದ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗಗಳ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

ಚಾಮರಾಜನಗರ, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತಿತರ ಕಡೆ ಹೊರ ರಾಜ್ಯಗಳಿಂದ ಬರುವ ಮತ್ತು ಹೊರ ಹೋಗುವವರ ಮೇಲೆ ತೀವ್ರ ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ಕೊಡಲಾಗಿದೆ.

ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಆರ್‍ಟಿಪಿಸಿಆರ್ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ.