ಕರ್ನಾಟಕದಲ್ಲಿ ಕೊರೋನಾ: ಇಲ್ಲಿದೆ ಜು.28ರ ಅಂಕಿ ಸಂಖ್ಯೆ
* ಕರ್ನಾಟಕದ ಕೊರೋನಾ ಅಂಕಿ ಸಂಖ್ಯೆ
* ಕೊರೊನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆ
* ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.03ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.24
ಬೆಂಗಳೂರು, (ಜು.28): ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಇಂದು (ಜು.28) 1531 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 19 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2899195ಕ್ಕೆ ಏರಿಕೆಯಾಗಿದ್ರೆ, ಈವರೆಗೂ 36456 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಕೋವಿಡ್ ಮಾರ್ಗಸೂಚಿ ವಿಸ್ತರಣೆ: ರಾಜ್ಯ ಸರ್ಕಾರಗಳಿಗೆ ಖಡಕ್ ಸೂಚನೆ
ಒಟ್ಟು 2840147 ಸೋಂಕಿತರು ಗುಣಮುಖರಾಗಿದ್ದು. 22569 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.03ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.24ರಷ್ಟಿದೆ. ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 376 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1225957ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15843ಕ್ಕೆ ಏರಿಕೆಯಾಗಿದೆ.