Corona Crisis: ಕೋವಿಡ್‌ ಸೋಂಕು ಪತ್ತೆಯಾದರೆ ಸೀಲ್‌ಡೌನ್‌ ಇಲ್ಲ

ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೊರಡಿಸಿದೆ.

New Covid Guidelines Issued Amid Coronavirus Breakdown In Karnataka gvd

ಬೆಂಗಳೂರು (ಜೂ.29): ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಒಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೊರಡಿಸಿದೆ. ನಗರ ವ್ಯಾಪ್ತಿಗೆ ಅನ್ವಯಿಸಿ ಶಿಕ್ಷಣ ಸಂಸ್ಥೆ, ಕಾಲೇಜು ಹಾಗೂ ಅಪಾರ್ಟ್‌ಮೆಂಟ್‌ಗಳಲ್ಲಿ ಕೋವಿಡ್‌ ಪರೀಕ್ಷೆ, ಚಿಕಿತ್ಸೆ, ಕ್ವಾರಂಟೈನ್‌, ಪ್ರವೇಶ ಕುರಿತ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. 

ಸೋಂಕು ಕಂಡು ಬಂದರೆ ಶಾಲೆಗಳನ್ನು ಮುಚ್ಚುವ ಅಥವಾ ಅಪಾರ್ಟ್‌ಮೆಂಟ್‌ಗಳನ್ನು ಸೀಲ್‌ಡೌನ್‌ ಮಾಡುವ ಅಗತ್ಯವಿಲ್ಲ ಎಂದು ಹೇಳಲಾಗಿದೆ. ಶಾಲೆಗಳಲ್ಲಿ (12 ತರಗತಿವರೆಗೆ) ಸೋಂಕು ಲಕ್ಷಣ ಹೊಂದಿರುವ ಮಕ್ಕಳನ್ನು ಶಾಲೆಗೆ ಹಾಜರಾಗದಂತೆ ಸೂಚಿಸಬೇಕು. ಸೋಂಕು ಲಕ್ಷಣ ಹೊಂದಿರುವವರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ ಸೋಂಕು ದೃಢಪಟ್ಟಲ್ಲಿ ಅವರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಹೋಂ ಐಸೋಲೇಷನ್‌, ಕೋವಿಡ್‌ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಬೇಕು. ವರದಿ ನೆಗೆಟಿವ್‌ ಬಂದಲ್ಲಿ ಆರ್‌ಟಿಪಿಸಿಆರ್‌ ಮಾದರಿ ಪರೀಕ್ಷೆ ವರದಿ ಬರುವವರೆಗೂ ನಿಗಾದಲ್ಲಿ ಇರಿಸಿ ನಂತರ ಕ್ರಮ ವಹಿಸಬೇಕು.

ದಿಢೀರ್‌ ಸಾವಿರದ ಸನಿಹ ಬಂದ ಕೋವಿಡ್‌: ಹಳೆ ಕೇಸಿನ ಎಫೆಕ್ಟ್?

ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟು, ಸಿ.ಟಿ.ವ್ಯಾಲ್ಯೂ 25 ಇದ್ದಲ್ಲಿ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ. ಕಾಲೇಜು ಮತ್ತು ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಿ, ಸೋಂಕು ದೃಢಪಟ್ಟರೆ ಕೋವಿಡ್‌ ನಿಯಮ ಪಾಲಿಸಬೇಕು. ಶಾಲಾ ಕಾಲೇಜುಗಳಲ್ಲಿ ಪ್ರಕರಣ ವರದಿಯಾದ ಕೊಠಡಿಗಳನ್ನು ಶೇ. ಸೋಡಿಯಂ ಹೈಪೋಕ್ಲೋರೈಟ್‌ ದ್ರಾವಣದಿಂದ ಸ್ಚಚ್ಛಗೊಳಿಸಬೇಕು ಮತ್ತು ಮರುದಿನ ಕೊಠಡಿ ಬಳಕೆ ಮಾಡಬೇಕು.

ಕ್ಲಸ್ಟರ್‌ ಎಂದು ಪರಿಗಣಿಸಿ ಕ್ರಮ: ವಸತಿ ಸಮುಚ್ಛಯಗಳಲ್ಲಿ 3-5 ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್‌ ಎಂದು ಪರಿಗಣಿಸಿ ಹಾಗೂ 5ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾದಲ್ಲಿ ದೊಡ್ಡ ಕ್ಲಸ್ಟರ್‌ ಎಂದು ಪರಿಗಣಿಸಿ ನಿರ್ದಿಷ್ಟಬ್ಲಾಕ್‌ನ ಫ್ಲೋರ್‌ನಲ್ಲಿ ಸೋಂಕು ಲಕ್ಷಣ ಹೊಂದಿರುವ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಬೇಕು. 15ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾದಲ್ಲಿ ಸ್ಥಳೀಯ ಆರೋಗ್ಯ ಪ್ರಾಧಿಕಾರದ ನಿರ್ಧಾರದಂತೆ ಇಡೀ ಅಪಾರ್ಟ್‌ಮೆಂಟ್‌ ಕಾಂಪ್ಲೆಕ್ಸ್‌ನಲ್ಲಿ ಸೋಂಕು ಲಕ್ಷಣ ಹೊಂದಿರುವ ಎಲ್ಲರನ್ನು ರಾರ‍ಯಪಿಡ್‌ ಆ್ಯಂಟಿಜೆನ್‌ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ದೃಢಪಟ್ಟರೆ ಕೋವಿಡ್‌ ನಿಯಮದ ಅನ್ವಯ ಚಿಕಿತ್ಸೆ ಒದಗಿಸಬೇಕು.

ಸೋಂಕು ಪತ್ತೆಯಾದಲ್ಲಿ ಅಪಾರ್ಟ್‌ಮೆಂಟ್‌, ಕಾಂಪ್ಲೆಕ್ಸ್‌, ಟವರ್‌, ಬ್ಲಾಕ್‌ಗಳನ್ನು ಸೀಲ್‌ಡೌನ್‌ ಮಾಡುವ ಅಗತ್ಯವಿಲ್ಲ. ಬದಲಿಗೆ ಕೋವಿಡ್‌ ಕೊನೆಯ ಪ್ರಕರಣ ಗುಣಮುಖ ಹೊಂದುವವರೆಗೂ ಸಾಮಾನ್ಯ ಸೌಲಭ್ಯಗಳಾದ ಕ್ಲಬ್‌ಹೌಸ್‌, ಈಜುಕೊಳ, ಕ್ರೀಡಾ ಕೊಠಡಿ, ಸಂಘದ ಕಚೇರಿ ಇತ್ಯಾದಿಗಳನ್ನು ಮುಚ್ಚಬೇಕು. ನಂತರ ಶೇ.1 ಸೋಡಿಯಂ ಹೈಪೋಕ್ಲೋರೈಟ್‌ ದ್ರಾವಣ ಬಳಸಿ ಸ್ಯಾನಿಟೈಸ್‌ ಮಾಡಿ, ಮರುದಿನ ಸೌಲಭ್ಯಗಳನ್ನು ಪುನರ್‌ ಬಳಕೆ ಮಾಡಬೇಕು.

60 ವರ್ಷ ಮೇಲ್ಪಟ್ಟವರು ಹಾಗೂ ಇತರೆ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ರೋಗ ಲಕ್ಷಣ ಇದ್ದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಬೇಕು. ಸೋಂಕು ಲಕ್ಷಣ ರಹಿತರಿಗೆ ದೊಡ್ಡ ಪ್ರಮಾಣದ ಅಥವಾ ಸಾಮೂಹಿಕ ಕೋವಿಡ್‌ ಪರೀಕ್ಷೆಗೆ ಶಿಫಾರಸು ಮಾಡುವಂತಿಲ್ಲ. ಮನೆ ಆರೈಕೆಯಲ್ಲಿರುವ ಸೋಂಕಿತರ ಮನೆಯಲ್ಲಿ ಕೆಲಸ ಮಾಡುವವರು 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ರೋಗ ಲಕ್ಷಣಗಳಿಂದ ಮುಕ್ತರಾಗಿರಬೇಕು. ಎನ್‌.95 ಮಾಸ್ಕ್ ಧರಿಸಬೇಕು. ಎರಡು ಡೋಸ್‌ ಕೋವಿಡ್‌ ಲಸಿಕೆ ಕಡ್ಡಾಯವಾಗಿ ಪಡೆದಿರಬೇಕು.

ರಾಜ್ಯಗಳಿಗೆ ಮತ್ತಷ್ಟು ಕೋವಿಡ್‌ ಮುನ್ನೆಚ್ಚರಿಕೆ ಸೂಚನೆ: ಕೇಂದ್ರ ಸರ್ಕಾರ ತಾಕೀತು

ಕಡ್ಡಾಯ ಮಾಸ್ಕ್ ಧರಿಸಬೇಕು, ವ್ಯಕ್ತಿಗತ ಅಂತರ ಪಾಲಿಸಬೇಕು. ಕೈಗಳನ್ನು ಸ್ಯಾನಿಟೈಸ್‌ ಮಾಡಿಕೊಳ್ಳಬೇಕು. ಶಾಲೆ, ಕಾಲೇಜು ಹಾಗೂ ಕಚೇರಿ ದ್ವಾರದಲ್ಲಿ ಜ್ವರ ತಪಾಸಣೆಗೆ ಥರ್ಮಲ್‌ಗಳ ಬಳಕೆ ಮಾಡಬೇಕು. ಜ್ವರ, ನೆಗಡಿ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಇರುವವರನ್ನು ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಲು ಶಿಫಾರಸು ಮಾಡಬೇಕು. ಕೋವಿಡ್‌ ಮುನ್ನೆಚ್ಚರಿಕೆ ಲಸಿಕೆ ಪಡೆಯಲು ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Latest Videos
Follow Us:
Download App:
  • android
  • ios