Asianet Suvarna News Asianet Suvarna News

ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಬರೋ ಪ್ರವಾಸಿಗರಿಗೆ ನಿರ್ಬಂಧ! ಕಾರಣ ಇಲ್ಲಿದೆ

ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ

New year celebration 2024  Tourists restricted to Nandibetta at chikkaballapur rav
Author
First Published Dec 26, 2023, 11:39 PM IST

ಚಿಕ್ಕಬಳ್ಳಾಪುರ (ಡಿ.26): ಹೊಸ ವರ್ಷಾಚರಣೆಗೆ ದಿನಗಣನೆ ಶುರುವಾಗಿದ್ದು, ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ನಂದಿ ಹಿಲ್ಸ್​​ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.

ಹೊಸವರ್ಷಕ್ಕೆ ಕೆಲವೇ ದಿನಗಳು ಬಾಕಿ; ಗೃಹ ಸಚಿವ ಪರಮೇಶ್ವರ ಕೊಟ್ಟ ಸೂಚನೆ ಏನು?

ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಬಂಗಾರಪ್ಪ ಪುಣ್ಯಸ್ಮರಣೆ: ಬಿಜೆಪಿ ನಾಯಕರ ವಿರುದ್ಧವೇ ಮಾಜಿ ಸಚಿವ ಅರವಿಂದ ಲಿಂಬಾವಳಿ ವಾಗ್ದಾಳಿ!

Follow Us:
Download App:
  • android
  • ios