ಬೆಂಗಳೂರು [ನ.28]: ಹಿಂಗಾರು ಮಾರುತಗಳು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ತಿಂಗಳಾಂತ್ಯದವರೆಗೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಪ್ರಭಾವ ಕಡಿಮೆಯಾಗಿತ್ತು. ಇದೀಗ ಅರಬ್ಬಿ ಮತ್ತು ಬಂಗಾಳಕೊಲ್ಲಿ ಸಮುದ್ರದಲ್ಲಿ ಹಿಂಗಾರು ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಮೈಸೂರು, ಹಾಸನ ಕೊಡಗು ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್‌ ತಿಂಗಳ ಅಂತ್ಯದವರೆಗೆ ಸಾಧಾರಣದಿಂದ ಕೂಡಿದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬುಧವಾರ ಬೆಂಗಳೂರಿನ ಹಲವು ಭಾಗದಲ್ಲಿ ತುಂತುರು ಮಳೆಯಾದ ವರದಿಯಾಗಿದೆ. ಸಂಜೆವರೆಗೂ ಮೋಡ ಕವಿದ ವಾತಾವರಣ ಉಂಟಾಗಿತ್ತು. ಇದೇ ಪರಿಸ್ಥಿತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಕಂಡುಬಂದಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌  ಮಾಹಿತಿ ನೀಡಿದ್ದಾರೆ.