Asianet Suvarna News Asianet Suvarna News

ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆವು. ಅದಕ್ಕೆ ಮುಖ್ಯಮಂತ್ರಿಗಳು ಮತ್ತು ಸಚಿವರು ಸ್ಪಂದಿಸಿದ್ದು, ಮುಂದಿನ ಸಚಿವ ಸಂಪುಟವನ್ನು ಕಲಬುರಗಿಯಲ್ಲಿ ನಡೆಸಲಾಗುವುದು: ಸಚಿವ ಪ್ರಿಯಾಂಕ್‌ ಖರ್ಗೆ 
 

Next cabinet meeting will be held in Kalaburagi Says Minister Priyank Kharge grg
Author
First Published Sep 6, 2024, 6:34 AM IST | Last Updated Sep 6, 2024, 6:34 AM IST

ಬೆಂಗಳೂರು(ಸೆ.06):  ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹಾಗೂ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಉದ್ದೇಶದಿಂದ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆವು. ಅದಕ್ಕೆ ಮುಖ್ಯಮಂತ್ರಿಗಳು ಮತ್ತು ಸಚಿವರು ಸ್ಪಂದಿಸಿದ್ದು, ಮುಂದಿನ ಸಚಿವ ಸಂಪುಟವನ್ನು ಕಲಬುರಗಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ವಿರುದ್ಧ ಆರೋಪ ಬಂದ್ರೆ ಗೌರ್ನರ್‌ ಬೆಳಕಿನ ವೇಗ: ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ

ಹಿಂದೆಯೂ ಕಲಬುರಗಿಯಲ್ಲಿ ನಡೆದಿತ್ತು:

ಬೆಂಗಳೂರು, ಬೆಳಗಾವಿ ಹೊರತುಪಡಿಸಿ ಸಚಿವ ಸಂಪುಟ ಸಭೆ ಹೊರ ಜಿಲ್ಲೆಗಳಲ್ಲಿ ಹಲವು ಬಾರಿ ನಡೆದಿದೆ. ಜೆ.ಎಚ್‌.ಪಟೇಲ್‌ ಸಿಎಂ ಆಗಿದ್ದಾಗ 1997ರಲ್ಲಿ ಹುಬ್ಬಳ್ಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದರು. ಅದೇ ರೀತಿ ಬಿ.ಎಸ್‌. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಮೂರು ಬಾರಿ ಕಲಬುರಗಿಯಲ್ಲೇ ಸಚಿವ ಸಂಪುಟ ಸಭೆ ನಡೆಸಿದ್ದರು. ಹಾಗೆಯೇ, ಜಗದೀಶ್‌ ಶೆಟ್ಟರ್‌ ಅವರ ಅಧ್ಯಕ್ಷತೆಯಲ್ಲಿ 2012ರಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು.

Latest Videos
Follow Us:
Download App:
  • android
  • ios