ಅ. 7ರಿಂದ 8ರವರೆಗೂ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಅ.9ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದ ಹಮಾಮಾನ ಇಲಾಖೆ
ಬೆಂಗಳೂರು(ಅ.06): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಅ.6ರಿಂದ 9ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.6ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅ.7ರಿಂದ 8ರವರೆಗೂ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಅ.9ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
Chitradurga: ಅಕಾಲಿಕ ಮಳೆಗೆ ಸುಮಾರು 71153 ಹೆಕ್ಟೇರ್ ಬೆಳೆ ನಾಶ: ಕಂಗಾಲಾದ ಅನ್ನದಾತ
ಬೆಂಗಳೂರು ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವುದರಿಂದ ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
