ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. 

ಬೆಂಗಳೂರು(ಏ.02): ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕರ್ನಾಟಕದಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.