ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಂಗಳವಾರದ ತನಕ ಭರ್ಜರಿ ಮಳೆ

ಬೆಂಗಳೂರು(ಅ.09):  ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದಿಂದ ಮಂಗಳವಾರದ ತನಕ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ಬೆಳಗ್ಗೆ 8.30ರ ತನಕ ರಾಜ್ಯ ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್‌’ ನೀಡಲಾಗಿದೆ. ಆ ಬಳಿಕ ರಾಜ್ಯದಲ್ಲಿ ಭಾರಿ ಮಳೆ ಇನ್ನಷ್ಟು ವಿಸ್ತರಿಸಲಿದ್ದು, ಈ ಜಿಲ್ಲೆಗಳ ಜೊತೆಗೆ ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮುಂಗಾರು ಬೆಳೆನಷ್ಟ, ಕೈ ಹಿಡಿಯುವುದೇ ಹಿಂಗಾರು..!

ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿತ್ತು. ಆದಾಗ್ಯೂ ಕೆಲವೆಡೆ ಭರ್ಜರಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ತುಮಕೂರಿನ ಕುಣಿಗಲ್‌ನಲ್ಲಿ ತಲಾ 5 ಸೆಂ.ಮೀ, ಬೆಂ. ಗ್ರಾಮಾಂತರದ ನೆಲಮಂಗಲ 3, ಬೆಂಗಳೂರು ನಗರದ ಜಿಕೆವಿಕೆ, ಚಿಕ್ಕಬಳ್ಳಾಪುರದ ಚಿಂತಾಮಣಿ 2 ಸೆಂ.ಮೀ ಮಳೆಯಾಗಿದೆ.