Asianet Suvarna News Asianet Suvarna News

ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ

ಕರಾವಳಿ, ಬೆಂಗಳೂರು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ 

Next Three Days Likely Rain in Karnataka grg
Author
First Published Nov 6, 2022, 12:17 PM IST

ಬೆಂಗಳೂರು(ನ.06):  ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಕರಾವಳಿ, ಬೆಂಗಳೂರು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ. ಬೆಂಗಳೂರಿನ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. 

ನಾಳೆಯಿಂದ ಕರ್ನಾಟಕದಲ್ಲಿ ಮತ್ತೆ ಮಳೆ..!

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಮುಂದಿನ ಮೂರು ದಿನ ಹಿಂಗಾರು ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮುಂಗಾರಿನಲ್ಲಿ ಭಾರೀ ಮಳೆಯಾದ ಪರಿಣಾಮ ರಾಜ್ಯದ ಜನತೆ ಪಡಬಾರದ ಸಂಕಷ್ಟಗಳನ್ನ ಎದುರಿಸಿದ್ದರು. ಇದೀಗ ಮತ್ತೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ರೈತಾಪಿ ವರ್ಗಕ್ಕೆ  ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. 

Follow Us:
Download App:
  • android
  • ios