ಕರ್ನಾಟಕಕ್ಕೂ ತಟ್ಟಿದ ಮ್ಯಾಂಡೌಸ್ ಎಫೆಕ್ಟ್: ಮೈಕೊರೆಯುವ ಚಳಿ ಮಧ್ಯೆ ಭಾರೀ ಮಳೆ..!
ಚಂಡಮಾರುತದ ಭೀತಿ ನಡುವೆ ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರದ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
ಬೆಂಗಳೂರು(ಡಿ.09): ಕರ್ನಾಟಕಕ್ಕೂ ಮ್ಯಾಂಡೌಸ್ ಎಫೆಕ್ಟ್ ತಟ್ಟಿದೆ. ಹೌದು, ಸಿಲಿಕಾನ್ ಸಿಟಿ ಬೆಂಗಳೂರು ಫುಲ್ ಕೂಲ್ ಕೂಲ್ ಆಗಿದೆ. ನಗರದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮುಂದಿನ ಎರಡು ದಿನ ನಗರದಲ್ಲಿ ಬೀಳುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಭೀತಿ ನಡುವೆ ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರದ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Cyclone : ರಾಜ್ಯಕ್ಕೆ 'ಮ್ಯಾಂಡೌಸ್' ಚಂಡಮಾರುತ ಆಗಮನ: ಮುಂದಿನ 5 ದಿನ ಮಳೆ
ಮಳೆ ಜೊತೆ ಗಾಳಿಯ ವೇಗವು ಹೆಚ್ಚಾಗುವ ಸಾಧ್ಯತೆ ಇದ್ದು, ಕನಿಷ್ಠ ತಾಪಮಾನ ಕೂಡ ಇಳಿಕೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ನಾಳೆ, ನಾಡಿದ್ದು ಗುಡುಗು ಸಹಿತ ಭಾರೀ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕರಾವಳಿ, ಉತ್ತರ ಒಳನಾಡಿಗೆ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.