ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಮಹೇಶ್ ಜೋಷಿ

ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಜಿಲ್ಲೆಯಲ್ಲಿ ನಡೆಯಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

next year kannada sahitya sammelana in mandya says dr mahesh joshi at haveri gvd

ಹಾವೇರಿ (ಜ.08): ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಜಿಲ್ಲೆಯಲ್ಲಿ ನಡೆಯಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ನಂತರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ಈ ವಿಷಯ ತಿಳಿಸಿದ್ದು, ಮುಂದಿನ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಚರ್ಚೆ ಆಯ್ತು. ಬೆಂ.ಗ್ರಾಮಾಂತರ, ಬೆಳಗಾವಿ , ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ಒಟ್ಟು 9 ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ನಡೆಸುವ ಬೇಡಿಕೆ ಇಟ್ಟಿದ್ದವು. 

ಒಟ್ಟು 46 ಮತದಾರರು ತಮ್ಮ ಮತ ಚಲಾವಣೆ ಮಾಡಿದ್ದರು. 17 ಮತಗಳು ಮಂಡ್ಯ ಜಿಲ್ಲೆಗೆ ಬಂತು. ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದವು. ಉತ್ತರ ಕನ್ನಡ ಜಿಲ್ಲೆಗೆ ಒಂದೂ ಮತ ಬರಲಿಲ್ಲ. ಅತಿ ಹೆಚ್ಚು ಮತ ಪಡೆದ ಮಂಡ್ಯ ಜಿಲ್ಲೆಯಲ್ಲಿ ಮುಂದಿನ ಅಖಿಲ ಭಾರತ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು. ಮಂಡ್ಯ ಜಿಲ್ಲೆಯಲ್ಲಿ ಮುಂದಿನ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧಾರ ಮಾಡಲಾಗಿದ್ದು, ಉಳಿದ ಕೆಲವು ಅಂಶಗಳನ್ನು ಬಹಿರಂಗ ಸಭೆಯಲ್ಲಿ ಹೇಳುವುದಾಗಿ ಮಹೇಶ್ ಜೋಷಿ ತಿಳಿಸಿದರು.

Haveri: 2ನೇ ದಿನದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭರ್ಜರಿ ಉತ್ಸಾಹ

ಸ್ತಬ್ಧಚಿತ್ರ ತಿರಸ್ಕಾರಕ್ಕೆ ಮಹೇಶ್‌ ಜೋಶಿ ಖಂಡನೆ: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಮಾದರಿ ಸ್ತಬ್ಧಚಿತ್ರಕ್ಕೆ ಕೇಂದ್ರದ ಅನುಮತಿ ನಿರಾಕರಣೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ ಜೋಶಿ ಖಂಡಿಸಿದ್ದಾರೆ. ಈ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಯಾವ ಆಧಾರದ ಮೇಲೆ ಸ್ತಬ್ದಚಿತ್ರ ತಿರಸ್ಕರಿಸಿದ್ದಾರೆ ಗೊತ್ತಿಲ್ಲ. ಸಮ್ಮೇಳನ ಮುಗಿದ ಪ್ರಶ್ನಿಸುತ್ತೇನೆ. ಸಚಿವರ ಗಮನಕ್ಕೆ ಹೋಗಿದೆಯಾ ಎನ್ನುವುದು ಗೊತ್ತಿಲ್ಲ. 2014 ರಿಂದ 2017ರ ವರೆಗೆ ಗಣರಾಜ್ಯೋತ್ಸವ ಪರೇಡನ್ನು ನಾನೇ ದೂರದರ್ಶನದಲ್ಲಿ ನೇರ ಪ್ರಸಾರಗಳನ್ನು ಮಾಡಿದ್ದೇನೆ. ಅಲ್ಲಿರುವ ಅಧಿಕಾರಿಗಳೂ ನನಗೆ ಗೊತ್ತು. ನಾನೇ ದೆಹಲಿಗೆ ಹೋಗಿ ಸರಿ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

Kannada Sahitya Sammelana: ಪರ್ಯಾಯ ಸಮ್ಮೇಳನ ನಡೆಸೋರು ಹಾವೇರಿ ವಿರೋಧಿಗಳು: ಮಹೇಶ್ ಜೋಷಿ

ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತದೆ. ಕೇಂದ್ರದ ನೌಕರಿಗಳಲ್ಲಿ ಕನ್ನಡಿಗರನ್ನು ಕಡೆಗಣಿಸಿದ್ದಾರೆ. ಗ್ರಾಮೀಣ ಬ್ಯಾಂಕ್‌ ಅರ್ಜಿ ಇಂಗ್ಲೀಷ್‌ನಲ್ಲಿವೆ. ಅದೆಲ್ಲವೂ ಕನ್ನಡ ಆಗಬೇಕೆಂಬ ಹೋರಾಟ ನಡೆಯುತ್ತಲೇ ಇದೆ. ಇದೀಗ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿದ್ದು ತಪ್ಪು. ಇದುವರೆಗೂ ಕಸಾಪ ಕೋರ್ಟ್‌ಗೆ ಹೋಗಿಲ್ಲ. ಅಗತ್ಯ ಬಿದ್ದರೆ ಈ ಪ್ರಕರಣದಲ್ಲಿ ಕೋರ್ಟ್‌ ಮೊರೆ ಹೋಗುತ್ತೇವೆ ಕೋರ್ಟ್‌ ನಿಂದ ನಿರ್ದೇಶನ ಕೊಡಿಸೋದಕ್ಕೆ ಯತ್ನಿಸುತ್ತೇವೆ ಎಂದರು.

Latest Videos
Follow Us:
Download App:
  • android
  • ios