ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6ರಲ್ಲಿ (NFHS 6) ಅಂಗವೈಕಲ್ಯ ಕುರಿತ ಪ್ರಶ್ನೆಗಳನ್ನು ಕೈಬಿಟ್ಟಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಬೆಂಗಳೂರು (ಆ.8) :  ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-6ರಲ್ಲಿ (NFHS 6) ಅಂಗವೈಕಲ್ಯ ಕುರಿತ ಪ್ರಶ್ನೆಗಳನ್ನು ಕೈಬಿಟ್ಟಿರುವುದನ್ನು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿಗೊಳಿಸಿದೆ.

ಈ ಸಂಬಂಧ ಜಾವೇದ್‌ ಅಬಿದಿ ಪ್ರತಿಷ್ಠಾನ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಎನ್‌ಎಫ್‌ಎಚ್‌ಎಸ್‌-6 ಸರ್ವೇಯಲ್ಲಿ (ಮನೆ ಮನೆ ಸಮೀಕ್ಷೆ) ಅಂಗವೈಕಲ್ಯ ಕುರಿತ ಪ್ರಶ್ನೆ ಕೇಳುವುದನ್ನು ಕೈಬಿಡಲು ಕೇಂದ್ರ ಸರ್ಕಾರ(central government) ನಿರ್ಧರಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಅಂದರೆ ಸಮೀಕ್ಷೆಯಲ್ಲಿ ಜನರಿಗೆ ಯಾವ ಯಾವ ರೀತಿಯ ಅಂಗವೈಕಲ್ಯ ಎಂಬುದನ್ನು ಗುರುತಿಸುವ ಗೋಜಿಗೆ ಹೋಗುತ್ತಿಲ್ಲ. ಂಗವಿಕಲರ ಹಕ್ಕುಗಳ ಕಾಯ್ದೆ (ಆರ್‌ಪಿಡಬ್ಲ್ಯುಡಿ)-2016ರ ಪಟ್ಟಿಯಲ್ಲಿ ಉಲ್ಲೇಖಿಸಲಾದ 21 ಅಂಗವೈಕಲ್ಯಗಳನ್ನು ಎನ್‌ಎಫ್‌ಎಚ್‌ಎಸ್‌-6ರ ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಸೇರ್ಪಡೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಅಂಬೇಡ್ಕರ್‌, ದಲಿತರ ಬಗ್ಗೆ ಸ್ಕಿಟ್; ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆ