Asianet Suvarna News Asianet Suvarna News

ಬೆಂಗಳೂರಲ್ಲಿ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು; 5 ಶಂಕಿತ ಉಗ್ರರ ಮನೆ ಮೇಲೆ ಎನ್‌ಐಎ ದಾಳಿ!

ಕೆಲ ತಿಂಗಳ ಹಿಂದೆ ಬೆಂಗಳೂರಿನ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್ -ಎ-ತೋಯ್ದಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದೆ. 

NIA attack on the house of 5 suspected terrorists at bengaluru rav
Author
First Published Dec 14, 2023, 5:37 AM IST

 ಬೆಂಗಳೂರು (ಡಿ.14): ಕೆಲ ತಿಂಗಳ ಹಿಂದೆ ಬೆಂಗಳೂರಿನ ಸರಣಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣ ಸಂಬಂಧ ಬಂಧಿತರಾಗಿದ್ದ ಲಷ್ಕರ್ -ಎ-ತೋಯ್ದಾ (ಎಲ್‌ಇಟಿ) ಸಂಘಟನೆಯ ಶಂಕಿತ ಐವರು ಉಗ್ರರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿ ಕೆಲ ದಾಖಲೆಗಳನ್ನು ಜಪ್ತಿ ಮಾಡಿದೆ. 

ಪುಲಕೇಶಿನಗರ, ಹೆಬ್ಬಾಳ, ಆ‌ರ್.ಟಿ.ನಗರ ಹಾಗೂ ಕೊಡಿಗೇಹಳ್ಳಿ ಸೇರಿದಂತೆ ನಗರದ ಒಟ್ಟು 6 ಕಡೆ ಎನ್‌ಐಎ ದಾಳಿ ನಡೆಸಿದ್ದು, ಶಂಕಿತರ ಉಗ್ರರ ಸಂಪರ್ಕ ಜಾಲದ ಶೋಧನೆಯನ್ನು ನಡೆಸಿದೆ. ಈ ವೇಳೆ ಡಿಜಿಟಲ್ ಸಾಕ್ಷ್ಯಗಳು, 7.3 ಲಕ್ಷ ರು ನಗದು ಹಾಗೂ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್‌ಐಎ ಹೇಳಿದೆ.

Breaking news: ಶಾಲೆಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಇದೀಗ ಅಪರಿಚಿತನಿಂದ ರಾಜಭವನಕ್ಕೆ ಬಾಂಬ್ ಬೆದರಿಕೆ!

ಏನಿದು ಪ್ರಕರಣ? 
ವಿಧ್ವಂಸಕ ಕೃತ್ಯ ಸಂಚು ರೂಪಿಸಿದ ಮಾಹಿತಿ ಪಡೆದ ಸಿಸಿಬಿ, ಇದೇ ವರ್ಷದ ಜು.19 ರಂದು ಹೆಬ್ಬಾಳ ಸಮೀಪದ ಸುಲ್ತಾನ್ ಪಾಳ್ಯದ ಸೈಯದ್ ಸುಹೇಲ್‌ಖಾನ್ ಮನೆ ಮೇಲೆ ದಾಳಿ ನಡೆಸಿತ್ತು. ಆಗ ಸುಹೇಲ್, ಪುಲಿಕೇಶಿ ನಗರದ ಮೊಹಮದ್ ಫೈಜಲ್ ರಬ್ಬಾನಿ, ಕೊಡಿಗೇಹಳ್ಳಿಯ ಮಹಮದ್ ಉಮರ್, ಜಾಹೀದ್ ತಬ್ರೇಜ್ ಹಾಗೂ ಆರ್ .ಟಿ.ನಗರದ ಸೈಯದ್ ಮುದಾಸೀರ್‌ಪಾಷ ಸೇರಿ ಐವರು ಶಂಕಿತ ಉಗ್ರರನ್ನು ಬಂಧಿಸಿತ್ತು. ಆರೋಪಿಗಳಿಂದ 7 ನಾಡಾ ಪಿಸ್ತೂಲ್‌ ಗಳು, 45 ಜೀವಂತ ಗುಂಡುಗಳು ವಾಕಿಟಾಕಿ ಸೆಟ್ಸ್, ಡ್ರ್ಯಾಗರ್, ಗ್ರೆನೈಡ್‌ಗಳು ಹಾಗೂ 13 ಮೊಬೈಲ್ ಗಳು ಜಪ್ತಿಯಾಗಿದ್ದವು.

ಅಪರಿಚಿತನಿಂದ ಪುಲ್ವಾಮಾ ಸಂಚುಕೋರ, ಜೈಶ್‌ ಭಯೋತ್ಪಾದಕ ಅಲಂಗೀರ್‌ ಕಿಡ್ನಾಪ್‌!

ಇನ್ನು ಈ ತಂಡದ ಮಾಸ್ಟರ್ ಮೈಂಡ್ ಜುನೈದ್ ಅಹ್ಮದ್ ಸೇರಿದಂತೆ ಮೂವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಶಂಕಿತ ಉಗ್ರರಿಗೆ ಜಿಹಾದ್ ಬೋಧಿಸಿರುವುದು ಎಲ್‌ಇಟಿಗೆ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ 2008ರ ಬೆಂಗಳೂರು ಸರಣಿ ಬಾಂಬ್ ಸೋಟ ಪ್ರಕರಣದ ಆರೋಪಿ ಶಂಕಿತ ಉಗ್ರ ಟಿ.ನಾಸಿರ್ ಎಂಬುದು ಸಿಸಿಬಿ ತನಿಖೆಯಲ್ಲಿ ಬಯಲಾಗಿತ್ತು. ಈ ಪ್ರಕರಣವು ಬಳಿಕ ಎನ್‌ಐಎಗೆ ವರ್ಗವಾಗಿತ್ತು.

Latest Videos
Follow Us:
Download App:
  • android
  • ios