ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: 4 ರಾಜ್ಯ, 11 ಕಡೆ ಎನ್‌ಐಎ ರೇಡ್‌

ಬೆಂಗಳೂರಿನ ಬನಶಂಕರಿ, ಕುಮಾರಸ್ವಾಮಿ ಲೇಔಟ್‌, ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳ 11 ಸ್ಥಳಗಳಲ್ಲಿ ಎನ್‌ಐಎ ಕಾರ್ಯಾಚರಣೆ ನಡೆಸಿದ್ದು, ಕೆಫೆ ಬಾಂಬ್ ಸ್ಫೋಟದಲ್ಲಿ 11 ಮಂದಿ ಪಾಲ್ಗೊಂಡಿರುವ ಬಗ್ಗೆ ಎನ್‌ಐಎ ಶಂಕೆ ವ್ಯಕ್ತಪಡಿಸಿದೆ. ದಾಳಿ ವೇಳೆ ಕೆಲವು ಡಿಜಿಟಲ್ ಪುರಾವೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

NIA Raid in 4 states 11 places on  Rameshwaram Cafe Bomb Blast case grg

ಬೆಂಗಳೂರು(ಮೇ. 22):  ಬೆಂಗಳೂರಿನ ಕೆಫೆಯೊಂದರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಮಾಡ್ಯುಲ್‌ನ ಐಸಿಸ್‌ ಶಂಕಿತ ಉಗ್ರರ ಸಂಪರ್ಕ ಜಾಲ ಪತ್ತೆಗೆ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಮಂಗಳವಾರ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ದಾಳಿ ನಡೆಸಿ ಜಾಲಾಡಿದೆ.

ಬೆಂಗಳೂರಿನ ಬನಶಂಕರಿ, ಕುಮಾರಸ್ವಾಮಿ ಲೇಔಟ್‌, ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳ 11 ಸ್ಥಳಗಳಲ್ಲಿ ಎನ್‌ಐಎ ಕಾರ್ಯಾಚರಣೆ ನಡೆಸಿದ್ದು, ಕೆಫೆ ಬಾಂಬ್ ಸ್ಫೋಟದಲ್ಲಿ 11 ಮಂದಿ ಪಾಲ್ಗೊಂಡಿರುವ ಬಗ್ಗೆ ಎನ್‌ಐಎ ಶಂಕೆ ವ್ಯಕ್ತಪಡಿಸಿದೆ. ದಾಳಿ ವೇಳೆ ಕೆಲವು ಡಿಜಿಟಲ್ ಪುರಾವೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

Rameshwaram Cafe Blast Case: ಬೆಂಗಳೂರು to ಕೊಲ್ಕತ್ತಾ, ಉಗ್ರರು ಸಿಕ್ಕಿಬಿದ್ದಿದ್ದು ಹೇಗೆ? ಇಂಚಿಂಚು ಮಾಹಿತಿ

ಮಾ.1ರಂದು ಕುಂದಲಹಳ್ಳಿಯ ಐಟಿಪಿಎಲ್ ರಸ್ತೆಯ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಕೃತ್ಯದಲ್ಲಿ ಶಿವಮೊಗ್ಗ ಐಸಿಎಸ್ ಮಾಡ್ಯುಲ್‌ನ ಶಂಕಿತ ಉಗ್ರರಾದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಬ್ದುಲ್ ಮತೀನ್‌ ತಾಹ, ಮುಸಾಬೀರ್ ಹುಸೇನ್‌ ಹಾಗೂ ಮಾಝ ಮುನೀರ್ ಸೇರಿದಂತೆ ಐವರನ್ನು ಎನ್‌ಐಎ ಬಂಧಿಸಿತ್ತು. ಈ ಕೃತ್ಯದ ತನಿಖೆ ಮುಂದುವರೆಸಿದ ಎನ್‌ಐಎ ಅಧಿಕಾರಿಗಳು, ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಶಂಕಿತ ಉಗ್ರರ ಸಂಪರ್ಕ ಜಾಲಾಡಿದೆ. ಈ ದಾಳಿಯಲ್ಲಿ 2012ರ ಬೆಂಗಳೂರು-ಹುಬ್ಬಳ್ಳಿಯಲ್ಲಿ ವಿಧ್ವಂಸಕ ಕೃತ್ಯದ ಸಂಚು ಪ್ರಕರಣದ ಎಲ್‌ಇಟಿ ಶಂಕಿತ ಉಗ್ರರಿಗೆ ಸೇರಿ ಸ್ಥಳಗಳು ಸೇರಿವೆ ಎಂದು ಎನ್‌ಐಎ ತಿಳಿಸಿದೆ.

ಬನಶಂಕರಿ-ಕೆ.ಎಸ್‌.ಲೇಔಟ್‌ನಲ್ಲಿ ತಪಾಸಣೆ:

ಶಿವಮೊಗ್ಗ ಜಿಲ್ಲೆಯಲ್ಲಿ ಐಸಿಸ್ ಸಂಘಟನೆ ಕಟ್ಟುವ ಮುನ್ನ ಬೆಂಗಳೂರಿನಲ್ಲಿ ಐಸಿಸ್ ಮುಖಂಡರ ಜತೆ ಅಬ್ದುಲ್ ಮತೀನ್ ಹಾಗೂ ಮುಸಾಬೀರ್ ಸಂಪರ್ಕದಲ್ಲಿದ್ದರು. ಹೀಗಾಗಿ ಬನಶಂಕರಿ ಹಾಗೂ ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯಲ್ಲಿ ಈ ಎನ್‌ಐಎ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿಯೊಬ್ಬನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿನಲ್ಲಿ ಮತೀನ್ ಸ್ನೇಹಿತರ ವಿಚಾರಣೆ 

ತಮಿಳುನಾಡಿನ ಕೊಯಮತ್ತೂರಿನಲ್ಲಿ ಶಂಕಿತ ಉಗ್ರ ಮತೀನ್‌ನ ಸ್ನೇಹಿತರಾದ ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಎನ್‌ಐಎ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ ಎನ್ನಲಾಗಿದೆ. ಕೆಫೆ ಸ್ಫೋಟಕ್ಕೂ ಮುನ್ನ ಕೊಯಮತ್ತೂರಿನಲ್ಲಿ ಮತೀನ್ ಹಾಗೂ ಮುಸಾಬೀರ್‌ ಆಶ್ರಯ ಪಡೆಯಲು ಈ ಸ್ನೇಹಿತರು ನೆರವಾಗಿದ್ದರು ಎಂದು ತಿಳಿದು ಬಂದಿದೆ.

Latest Videos
Follow Us:
Download App:
  • android
  • ios