ನೈಸ್ ಅಕ್ರಮ: ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು!

ಸದನದಿಂದ ಬಿಜೆಪಿ ಸದಸ್ಯರನ್ನು ಹೊರದಬ್ಬಿದ ವಿಚಾರಕ್ಕೆ ಸರ್ಕಾರದ ವಿರುದ್ಧ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೈಸ್ ಅಕ್ರಮ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ ಅಕ್ರಮದ ಕುರಿತು ಸಿಎಂಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. 

NICE illegality issue  HDK tweets against cm siddaramaiah rav

ಬೆಂಗಳೂರು (ಜು.23) ಸದನದಿಂದ ಬಿಜೆಪಿ ಸದಸ್ಯರನ್ನು ಹೊರದಬ್ಬಿದ ವಿಚಾರಕ್ಕೆ ಸರ್ಕಾರದ ವಿರುದ್ಧ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೈಸ್ ಅಕ್ರಮ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ ಅಕ್ರಮದ ಕುರಿತು ಸಿಎಂಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. 

ಮಾನ್ಯ ಸಿದ್ದರಾಮಯ್ಯನವರೇ, ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ! ಇಂಥಾ ನಿಮ್ಮನ್ನು 'ಸುಳ್ಳುರಾಮಯ್ಶ' ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆ. ತಾವು 'ಸತ್ಯರಾಮಯ್ಯ'ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ನೀವು ದಯಮಾಡಿ ಪುರುಸೊತ್ತು ಮಾಡಿಕೊಂಡು ಪಾರಾಯಣ ಮಾಡಿ ಎಂದಿದ್ದಾರೆ. 

ಜೆಡಿಎಸ್‌ ನಿರ್ಧಾರದ ಮೇಲೆ ನಿಂತಿದೆಯಾ ಮೈತ್ರಿ ಭವಿಷ್ಯ..?: ಸಭೆ ಬಳಿಕ ಹೆಚ್‌ಡಿಡಿ ಹೇಳಿದ್ದೇನು ?

 

ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಸಾಹೇಬರು ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅದುವರೆಗೆ ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ ಬಿಜೆಪಿ ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ ಸಿದ್ದರಾಮಯ್ಯನವರೇ, ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ 'ನಿತ್ಯ ಕಿರುಕುಳ'ವನ್ನು ಮರೆಯಲಾದೀತೆ? ಎಂದು ತಿವಿದಿದ್ದಾರೆ.

ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ 'ಅಪರ ಹರಿಶ್ಚಂದ್ರ'ನ ಸರಕಾರ! ಹೌದಲ್ಲವೇ? ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್  ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. 'ಸಿದ್ದನೆಪ' ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ನೈಸ್ ಅಕ್ರಮದ ಕುರಿತು ಸತ್ಯ ಮಾತಾಡುವಂತೆ ಸವಾಲು ಹಾಕಿದ್ದಾರೆ.

ನೈಸ್‌ ವಿರುದ್ಧ ತನಿಖೆ ನಡೆಸದಂತೆ ಎಚ್‌ಡಿಕೆಗೆ ಯಾರೂ ಕೈ ಕಟ್ಟಿರಲಿಲ್ಲ: ಸಿಎಂ 

Latest Videos
Follow Us:
Download App:
  • android
  • ios