ನೈಸ್ ರಸ್ತೆ ಯೋಜನೆಗಾಗಿ ಕೆಐಎಡಿಬಿ ನಡೆಸಿದ್ದ ಭೂಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ನಿರ್ಧಾರವನ್ನು ಸ್ವಾಗತಿಸಿರುವ ಎಚ್.ಡಿ.ಕುಮಾರಸ್ವಾಮಿ, ರೈತರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.
ನವದೆಹಲಿ: ನೈಸ್ ರಸ್ತೆ (ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ) ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗೊಂಡಿದ್ದ ಭೂಸ್ವಾಧೀನವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ.
2026ರ ಜುಲೈ 29ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಅಕ್ರಮಗಳ ತನಿಖೆಗೆ ಆದೇಶಿಸಿತ್ತು. ಅಲ್ಲದೆ ಭೂಸ್ವಾಧೀನ ನಿಯಮಗಳನ್ನು ಉಲ್ಲಂಘಿಸಿ, ರೈತರಿಗೆ ದಶಕಗಳ ಕಾಲ ಸೂಕ್ತ ಪರಿಹಾರ ನೀಡದೆ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಈ ಹಿಂದೆ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ರದ್ದುಗೊಳಿಸಿ, ರೈತರ ಪರವಾಗಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈಗ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಮುಂದೂಡಿದೆ.
ಕಿರಿಯ ಸಹಾಯಕ ಹುದ್ದೆಗೆ ನೈಸ್ ಅಕ್ರಮ ತನಿಖೆ ತಡೆ ನೀಡಲು ಸುಪ್ರೀಂ ನಕಾರ: ಕುಮಾರಸ್ವಾಮಿ ಸ್ವಾಗತ
ನೈಸ್ ಯೋಜನೆ ಅಕ್ರಮಗಳ ವಿಚಾರದಲ್ಲಿ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೀಗಾಗಿ ರೈತರ ಹೋರಾಟಕ್ಕೆ ನ್ಯಾಯಯುತ ಬೆಲೆ ಸಿಕ್ಕಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ನೈಸ್ ವಿಚಾರದಲ್ಲಿ ಹೈಕೋರ್ಟ್ ವ್ಯಕ್ತಪಡಿಸಿರುವ ಕಟುವಾದ ಅಭಿಪ್ರಾಯಗಳಿಗೆ ಸುಪ್ರೀಂ ಕೋರ್ಟ್ ನಲ್ಲಿ ತಡೆಯಾಜ್ಞೆ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ. ನ.2ರಂದು ವಿಚಾರಣೆಗೆ ನ್ಯಾಯಾಲಯ ನಿಗದಿ ಮಾಡಿದೆ. ಅವರ ಪರ ವಕೀಲರು ತಡೆಯಾಜ್ಞೆ ಕೊಡಿ ಎಂದು ಕೇಳಿದ್ದಾರೆ. ಅಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ತಡೆಯಾಜ್ಞೆ ಸಿಗಲಿದೆ ಅಂತ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಎಂದರು.
ರೈತರ ಹೋರಾಟಕ್ಕೆ ನ್ಯಾಯಯುತ ಬೆಲೆ ಸಿಕ್ಕಿದೆ. ನೈಸ್ ವಿಚಾರ ದಾರಿ ತಪ್ಪಿಸಲು ಬಿಜೆಪಿ, ಜೆಡಿಎಸ್ ಮೇಲೆ ಆರೋಪ ಮಾಡಿದ್ದಾರೆ. ಅವರ ಪಾಪದ ಕೊಡ ತುಂಬಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ನೈಸ್’ ವ್ಯಾಪ್ತೀಲಿ 1 ಎಕ್ರೆಯನ್ನೂ ಖರೀದಿಸಿಲ್ಲ: ಎಚ್ಡಿಕೆ
ನೈಸ್ ಯೋಜನೆ ವ್ಯಾಪ್ತಿಯಲ್ಲಿ ನನ್ನ ಅಥವಾ ನನ್ನ ಕುಟುಂಬ ಅಕ್ರಮವಾಗಿ ಒಂದು ಎಕರೆ ಜಮೀನು ಖರೀದಿಸಿರುವುದನ್ನು ಸಾಬೀತು ಮಾಡಿದರೆ ನಾನೇ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.
ಶುಕ್ರವಾರ ಮಾದಾವರದ ನೈಸ್ ಟೋಲ್ ಪ್ಲಾಜಾ ಬಳಿ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರ ಅಹವಾಲು ಆಲಿಸಿ ಮಾತನಾಡಿದ ಅವರು, ನೈಸ್ ಯೋಜನೆ ವ್ಯಾಪ್ತಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಜಮೀನು ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಅದನ್ನು ಅವರು ಸಾಬೀತು ಮಾಡಿದರೆ, ರಾಜಕೀಯ ನಿವೃತ್ತಿ ಪಡೆದು ನೇಣು ಹಾಕಿಕೊಳ್ಳುವೆ ಎಂದರು.


