Asianet Suvarna News Asianet Suvarna News

Night Curfew in Karnataka: ಇಂದಿನಿಂದ ರಾಜ್ಯದಲ್ಲಿ 10 ದಿನಗಳ ಕಾಲ ನೈಟ್‌ ಕರ್ಫ್ಯೂ!

*ರಾಜ್ಯದಲ್ಲಿ 10 ದಿನಗಳ ಕಾಲ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿ
*ಅಗತ್ಯ, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ವಾಣಿಜ್ಯ ಚಟುವಟಿಕೆ ಸ್ತಬ್ಧ
*ಬಸ್‌, ರೈಲು, ವಿಮಾನ ಸಂಚಾರಕ್ಕಿಲ್ಲ ತಡೆ, ರಾತ್ರಿಪಾಳಿ, ಫುಡ್‌ಡೆಲಿವರಿಗೆ ಓಕೆ

Night curfew in Karnataka for 10 days from December 28 mnj
Author
Bengaluru, First Published Dec 28, 2021, 6:50 AM IST
  • Facebook
  • Twitter
  • Whatsapp

ಬೆಂಗಳೂರು (ಡಿ. 28): ಒಮಿಕ್ರೋನ್‌ ಭೀತಿ ಹಿನ್ನೆಲೆಯಲ್ಲಿ (Omicron Threat) ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ (Night Curfew) ಮಂಗಳವಾರ 10 ಗಂಟೆಯಿಂದ ಜಾರಿಯಾಗಲಿದ್ದು, ಮುಂದಿನ ಹತ್ತು ದಿನಗಳ ಕಾಲ ಪ್ರತಿ ದಿನ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ವಾಣಿಜ್ಯ ಚಟುವಟಿಕೆ ಹಾಗೂ ಅನಗತ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ. ಜತೆಗೆ ಸಭೆ, ಸಮಾರಂಭ, ಸಮಾವೇಶ, ಮದುವೆ ಕಾರ್ಯಕ್ರಮಗಳಲ್ಲಿ 300ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂಬ ನಿಯಮವೂ ಅನ್ವಯವಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಸಭೆ ಬಳಿಕ ರಾತ್ರಿ ಕಫä್ರ್ಯ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಇದರನ್ವಯ ರಾಜ್ಯದಲ್ಲಿ ಡಿ.28 ರಿಂದ ರಾತ್ರಿ ಬರುವ ಜ.7ರ ಬೆಳಗ್ಗೆ 5ಗಂಟೆವರೆಗೆ ರಾತ್ರಿ ಕಫä್ರ್ಯ ಜಾರಿಯಲ್ಲಿರಲಿದೆ.

ಈ ಅವಧಿಯಲ್ಲಿ ಅನಗತ್ಯ ಸುತ್ತಾಟ, ಜನ ಸೇರುವಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳು, ಬಾರ್‌, ಪಬ್‌, ರೆಸ್ಟೋರೆಂಟ್‌, ಚಲನಚಿತ್ರಮಂದಿರ ಸೇರಿದಂತೆ ಅಗತ್ಯಸೇವೆಯಲ್ಲದ ಯಾವುದೇ ವಾಣಿಜ್ಯ ಚಟುವಟಿಕೆಗೂ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

 ನೈಟ್‌ ಕರ್ಫ್ಯೂ ಯಾರಿಗೆ ನಿರ್ಬಂಧವಿಲ್ಲ?:

ರಾತ್ರಿ  ಕರ್ಫ್ಯೂ  ನಿರ್ಬಂಧದಿಂದ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ರೋಗಿಗಳು ಹಾಗೂ ಅವರ ಸಹಾಯಕರು, ಪೋಷಕರು ತುರ್ತು ಅಗತ್ಯವಿದ್ದಾಗ ಸಂಚರಿಸಬಹುದು. ರಾತ್ರಿ ಪಾಳಿಯೂ ಕಾರ್ಯನಿರ್ವಹಿಸುವ ಕೈಗಾರಿಕೆ, ಕಂಪೆನಿಗಳ ಉದ್ಯೋಗಿಗಳು, ಟೆಲಿಕಾಂ ಸೇವಾ ಕಂಪೆನಿಗಳ ಸಿಬ್ಬಂದಿ ತಮ್ಮ ಗುರುತಿನ ಚೀಟಿಯೊಂದಿಗೆ ಸಂಚರಿಸಬಹುದು.

ಸರಕು ಸಾಗಣೆ ವಾಹನಗಳಿಗೆ (ಖಾಲಿ ವಾಹನವೂ ಸೇರಿದಂತೆ) ನಿರ್ಬಂಧವಿಲ್ಲ. ಇ ಕಾಮರ್ಸ್‌, ಆಹಾರ ಸೇರಿದಂತೆ ಹೋಂ ಡೆಲಿವರಿ ನೀಡುವ ಉದ್ಯೋಗಿಗಳು, ವೈದ್ಯಕೀಯ, ತುರ್ತು ಹಾಗೂ ಅಗತ್ಯ ಸೇವೆಗಳು, ಔಷಧ ಮಳಿಗೆಗಳು ಕಾರ್ಯ ನಿರ್ವಹಿಸಬಹುದು. ಉಳಿದಂತೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ.

ಸಾರ್ವಜನಿಕ ಸಾರಿಗೆಗೆ ನಿರ್ಬಂಧವಿಲ್ಲ:

ಬಸ್ಸು, ರೈಲು, ಮೆಟ್ರೋ ಹಾಗೂ ವಿಮಾನಗಳು ಯಥಾಪ್ರಕಾರ ಸಂಚರಿಸುತ್ತವೆ. ಹೀಗಾಗಿ ಬಸ್ಸು, ರೈಲು, ವಿಮಾನ ನಿಲ್ದಾಣ, ತುರ್ತು ಅಗತ್ಯಗಳಿಗೆ ಸಂಚರಿಸಲು ಸಾರ್ವಜನಿಕ ಸಾರಿಗೆ, ಖಾಸಗಿ ವಾಹನಗಳು, ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ. ಬಸ್ಸು ನಿಲ್ದಾಣ, ರೈಲು, ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವವರು ಪ್ರಯಾಣದ ದಾಖಲೆ (ಟಿಕೆಟ್‌) ಹೊಂದಿರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನಿಯಮ ಮೀರುವವರ ವಿರುದ್ಧ ಹದ್ದಿನಗಣ್ಣು: ಗೌರವ್‌ ಗುಪ್ತಾ

ಸರ್ಕಾರದ ಕಠಿಣ ಕೋವಿಡ್‌ ನಿಯಮಗಳನ್ನು (Covid 19 Guidelines) ಪಾಲಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಸಿದ್ಧವಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್‌ಗುಪ್ತಾ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿ.28ರಿಂದ ಹತ್ತು ದಿನ ರಾತ್ರಿ ಕರ್ಫ್ಯೂ ಜಾರಿಗೆ ತಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ನಿಯಮಗಳನ್ನು ಮೀರುವವರ ವಿರುದ್ಧ ಪಾಲಿಕೆ ಹದ್ದಿನ ಕಣ್ಣು ಇಡಲಿದೆ. ಪಬ್‌, ಹೋಟೆಲ್‌, ಕ್ಲಬ್‌, ಬಾರ್‌ಗಳಿಗೆ ದಿಢೀರ್‌ ಭೇಟಿ ನೀಡಿ ಸರ್ಕಾರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆಯೇ ಎಂದು ಮಾರ್ಷಲ್‌ಗಳು, ಗೃಹರಕ್ಷಕರು, ಆರೋಗ್ಯ ಅಧಿಕಾರಿಗಳು ನಿಗಾ ವಹಿಸುವರು ಎಂದು ಹೇಳಿದರು.

ನಿಯಮಗಳನ್ನು ಉಲ್ಲಂಘಿಸಿ ಓಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅನಾವಶ್ಯಕವಾಗಿ ರಾತ್ರಿ 10ರ ಬಳಿಕ ತಿರುಗಾಡುವ ವಾಹನಗಳನ್ನು ಸಂಚಾರಿ ಪೊಲೀಸರು (Traffic Police) ತಪಾಸಣೆಗೆ ಒಳಪಡಿಸಲಿದ್ದಾರೆ. ಈಗಾಗಲೇ ಸರ್ಕಾರ ತಿಳಿಸಿರುವಂತೆ ತುರ್ತು ಸೇವೆಗಳನ್ನು ಹೊರತುಪಡಿಸಿ ಇತರರು ನಿಯಮ ಉಲ್ಲಂಘಿಸಿದರೆ ಪೊಲೀಸರು ನಿಗಾ ಇಡಲಿದ್ದಾರೆ. ಶೇ.100ರಷ್ಟುಸರ್ಕಾರದ ಮಾರ್ಗಸೂಚಿಗಳ ಪಾಲನೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:

1) Covid 19 Variant: ಒಮಿಕ್ರೋನ್‌ ಸ್ಫೋಟ: ಸೋಮವಾರ ದಾಖಲೆಯ 156 ಹೊಸ ಕೇಸ್‌!

2) Covid in India: ಭಾರತಕ್ಕೂ ಬಂತು ಕೋವಿಡ್ ಗುಳಿಗೆ, ತುರ್ತು ಬಳಕೆಗೆ ಶಿಫಾರಸು!

3) India Fights Corona: 'ಕೋವಿಡ್‌ ಹೆಚ್ಚಾದರೆ ಸ್ಥಳೀಯ ನಿರ್ಬಂಧ ವಿಧಿಸಿ, ಪಂಚಸೂತ್ರ ಪಾಲಿಸಿ'

Follow Us:
Download App:
  • android
  • ios