Asianet Suvarna News Asianet Suvarna News

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವಿಲ್ಲ: ಸಚಿವ ಈಶ್ವರ ಖಂಡ್ರೆ

ಬಂಡೀಪುರ ಅರಣ್ಯ ಪ್ರದೇಶ ವನ್ಯಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು. ಹಾಗೆಯೇ, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Night traffic restrictions will not be lifted in Bandipur Says Minister Eshwar Khandre gvd
Author
First Published Feb 12, 2024, 5:23 AM IST

ಮೈಸೂರು (ಫೆ.12): ಬಂಡೀಪುರ ಅರಣ್ಯ ಪ್ರದೇಶ ವನ್ಯಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು. ಹಾಗೆಯೇ, ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6 ರಿಂದ ರಾತ್ರಿ 9 ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ. ಆದಾಗ್ಯೂ, ಕೆಲವು ವಿಶೇಷ ಸಂದರ್ಭ ಅಂದರೆ, ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಯಾವುದೇ ಸಮೀಕ್ಷೆ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

7,500 ಎಕರೆ ಅರಣ್ಯ ಭೂಮಿ ಗುತ್ತಿಗೆ: ಸ್ವಾತಂತ್ರ್ಯ ಪೂರ್ವದಲ್ಲಿ ರಾಜ್ಯದ ಕೆಲವೆಡೆ 7,500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘಕಾಲದ ಅವಧಿಗೆ ಗುತ್ತಿಗೆ ನೀಡಿದ್ದಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ, ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು. ಇದಕ್ಕಾಗಿ, ವಿಶೇಷ ತಂಡ ಮತ್ತು ಕಾನೂನು ಕೋಶ ರಚಿಸಲಾಗಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಸಚಿವ ಈಶ್ವರ ಖಂಡ್ರೆ

ಅಧಿಕೃತ ವರದಿ ಪ್ರಕಾರ, ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. ಆದರೆ, ಇನ್ನೂ ಹೆಚ್ಚಿನ ಒತ್ತುವರಿ ಆಗಿರುವ ಬಗ್ಗೆ ದೂರುಗಳಿದ್ದು, ಒತ್ತುವರಿಯ ನಿಖರ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು, ಒತ್ತುವರಿ ತೆರವು ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

Follow Us:
Download App:
  • android
  • ios