ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶನಿವಾರದಂದು ನಿತೀಶ್ ಕೆ. ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಲ್‌ ಚಂದ್ರಶೇಖರ್ ನಾಯಕ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

ರಾಯಚೂರು (ಜು.6): ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶನಿವಾರದಂದು ನಿತೀಶ್ ಕೆ. ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಲ್‌ ಚಂದ್ರಶೇಖರ್ ನಾಯಕ್ ಅವರು ಅಧಿಕಾರ ಹಸ್ತಾಂತರ ಮಾಡಿದರು.

2015ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ನಿತೀಶ್ ಕೆ(Nitish K IAS). ರಾಯಚೂರಿಗೆ ವರ್ಗಾವಣೆಯಾಗುವ ಮೊದಲು ಬೆಂಗಳೂರಿನ ಹಣಕಾಸು ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಾಕೃತಿಕ ವಿಕೋಪ ತಡೆಗೆ ಅಗತ್ಯ ಕ್ರಮಕ್ಕೆ ಸಚಿವ ಎನ್‌ಎಸ್ ಬೋಸರಾಜ್ ಸೂಚನೆ

ಕಳೆದ 3 ವರ್ಷಗಳ ರಾಯಚೂರು ಜಿಲ್ಲಾಧಿಕಾರಿ ಆಗಿದ್ದ ಎಲ್. ಚಂದ್ರಶೇಖರ್ ನಾಯಕ್, ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ ರಾಯಚೂರು ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಸರ್ಕಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನ ವರ್ಗಾವಣೆ ಮಾಡಿದೆ