ಕರ್ನಾಟಕ ಮತ್ತೆ ಲಾಕ್‌ಡೌನ್ ಆಗುತ್ತಾ? ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ಕೊರೋನಾ ವೈರಸ್ ಮಾಹಾಮಾರಿ ದಿನದಿಂದ ದಿನಕ್ಕ ಏರುತ್ತಿರುವುದರಿಮದ ಮತ್ತೆ ಲಾಕ್‌ಡೌನ್ ಆಗುತ್ತಾ ಎನ್ನುವ ಸುದ್ದಿ ಹಬ್ಬಿದ್ದು, ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

NO Another Lock Down In Karnataka Says Minister Dr Sudhakar

ಕಲಬುರಗಿ, (ಜೂನ್.14): ಕರ್ನಾಟಕ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಜೂನ್ 14 ರ ಭಾನುವಾರ ಬೆಳಿಗ್ಗೆ ಕಲಬುರಗಿ ನಗರದ ದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ  ಡಾ.ಸುಧಾಕರ್, "ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರೊಂದಿಗೆ ಮಾತನಾಡಲಿದ್ದಾರೆ" ಎಂದು ಹೇಳಿದರು.

ಮತ್ತೆ ಲಾಕ್‌ಡೌನ್‌ ಮಾಡಲು ಪ್ರಧಾನಿ ಮೋದಿ ಚಿಂತಿಸಿದ್ದಾರಾ? 

"ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಲ್ಲ. ಎಲ್ಲಾ ವ್ಯವಸ್ಥೆಗಳನ್ನು ಮಾರ್ಗಸೂಚಿಗಳ ಪ್ರಕಾರ ಮಾಡಲಾಗುತ್ತದೆ" ಎಂದು ಅವರು ಹೇಳಿದರು. ಶಂಕಿತ ಜನರ ಗಂಟಲು ದ್ರವದ ಮಾದರಿಯ ವರದಿ ಬರುವ ಮುನ್ನವೇ ಜನರನ್ನು ತಮ್ಮ ಮನೆಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಅವರು ಸಮರ್ಥಿಸಿಕೊಂಡರು.

ವ್ಯಕ್ತಿಯು ಯಾವುದೇ ರೋಗ ಲಕ್ಷಣಗಳನ್ನು ಹೊಂದುವುದಿಲ್ಲದಿದ್ದರೆ ಸಾಂಕ್ರಾಮಿಕ ರೋಗ ಕೊರೋನಾ ಹರಡುವ ಸಾಧ್ಯತೆಗಳು ಕಡಿಮೆ ಎಂದು ಡಬ್ಲ್ಯುಎಚ್‌ಒ ಸ್ಪಷ್ಟಪಡಿಸಿದೆ ಎಂದು ಸಚಿವರು ಹೇಳಿದರು.

ಈಗ, ಮಹಾರಾಷ್ಟ್ರ ಮತ್ತು ವಿದೇಶಗಳಿಂದ ಆಗಮಿಸುವವರನ್ನು ಮಾತ್ರ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ ಎಂದು ಡಾ.ಸುಧಾಕರ್ ಮಾಹಿತಿ ನೀಡಿದರು.

#NewsIn100Seconds ಈ ಕ್ಷಣದ ಪ್ರಮುಖ ಸುದ್ದಿಗಳು

"

Latest Videos
Follow Us:
Download App:
  • android
  • ios