ನಕಲಿ ಆಧಾರ್ ಕಾರ್ಡ್ ಬಳಸಿ ಪಾಸ್‌ಪೋರ್ಟ್ ಪಡೆದು ಮಾನವ ಕಳ್ಳಸಾಗಣೆ ಆರೋಪದಲ್ಲಿ ಬಂಧಿತನಾಗಿರುವ ಬಾಂಗ್ಲಾ ಪ್ರಜೆಗೆ ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಈ ಪಾಸ್‌ಪೋರ್ಟ್ ಬಳಸಿ ಐದು ಬಾರಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಿದ್ದ ಆರೋಪಿಯ ಜಾಮೀನು ಅರ್ಜಿಯನ್ನು, ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ಪಡೆದುಕೊಂಡಿದ್ದ ಪಾಸ್‌ಪೋರ್ಟ್ ಮೂಲಕ 5 ಬಾರಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಿದ್ದಲ್ಲದೆ, ಮಾನವ ಕಳ್ಳಸಾಗಣೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಾಂಗ್ಲಾ ಪ್ರಜೆಯೊಬ್ಬನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸದ್ಯ ಅಸ್ಸಾಂ ವಿಳಾಸ ಹೊಂದಿರುವ ಬಾಂಗ್ಲಾ ಪ್ರಜೆ ಅಮೋಲ್ ಚಂದ್ರ ದಾಸ್ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಹಾಗೂ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ ಆರೋಪಕ್ಕೆ ಸಂಬಂಧಿಸಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ 2025ರ ಆ.23ರಂದು ವಜಾಗೊಳಿಸಿತ್ತು.
ಐಪಿಸಿ ಸೆಕ್ಷನ್ 370(3) (ಒಬ್ಬರಿಗಿಂತ ಹೆಚ್ಚು ವ್ಯಕ್ತಿಗಳ ಕಳ್ಳ ಸಾಗಣೆ), 120ಬಿ (ಕ್ರಿಮಿನಲ್ ಒಳಸಂಚು) ಹಾಗೂ ವಿದೇಶಿಯರ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯ
ವಿಶೇಷ ನ್ಯಾಯಾಲಯದ ಈ ಆದೇಶ ರದ್ದುಪಡಿಸಿ, ಜಾಮೀನು ಮಂಜೂರು ಮಾಡುವಂತೆ ಕೋರಿ ಆರೋಪಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ. ಈ ಅರ್ಜಿಯನ್ನು ವಜಾಗೊಳಿಸಿ ನ್ಯಾ. ಎಚ್.ಪಿ. ಸಂದೇಶ್ ಹಾಗೂ ನ್ಯಾ. ವೆಂಕಟೇಶ್ ನಾಯ್ಕ್ ಅವರ ವಿಭಾಗೀಯ ಪೀಠ ಆದೇಶಿಸಿದೆ.


