Asianet Suvarna News Asianet Suvarna News

ಡೆಂಘೀ ಎಮರ್ಜೆನ್ಸಿ ಘೋಷಣೆ ಸ್ಥಿತಿ ಬಂದಿಲ್ಲ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ಜ್ವರದ ಪ್ರಕರಣಗಳು ಇಲ್ಲ ಎನ್ನುತ್ತಿಲ್ಲ. ಡೆಂಘೀ ಜತೆಗೆ ಝೀಕಾ ವೈರಸ್ ಕೂಡ ಹರಡುತ್ತಿದೆ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸುವ ಸ್ಥಿತಿಯಿಲ್ಲ. ಜನರಲ್ಲಿ ವಿನಾಕಾರಣ ಆತಂಕ ಸೃಷ್ಟಿಸುವ ಪ್ರಯತ್ನ ಮಾಡಬೇಡಿ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ 
 

no dengue emergency in karnataka says minister dinesh gundurao grg
Author
First Published Jul 9, 2024, 6:44 AM IST

ಬೆಂಗಳೂರು(ಜು.09): ರಾಜ್ಯದಲ್ಲಿ ಡೆಂಘೀ ಜ್ವರದ ಪ್ರಕರಣಗಳು ಇಲ್ಲ ಎನ್ನುತ್ತಿಲ್ಲ. ಡೆಂಘೀ ಜತೆಗೆ ಝೀಕಾ ವೈರಸ್ ಕೂಡ ಹರಡುತ್ತಿದೆ. ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸುವ ಸ್ಥಿತಿಯಿಲ್ಲ. ಜನರಲ್ಲಿ ವಿನಾಕಾರಣ ಆತಂಕ ಸೃಷ್ಟಿಸುವ ಪ್ರಯತ್ನ ಮಾಡಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ಹೆಚ್ಚಳದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂಬ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗಿರುವುದು ಸತ್ಯ. ಅವುಗಳನ್ನು ಕಡಿಮೆ ಮಾಡಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕ್ಕೆ ಸೂಚಿಸಲಾಗಿದೆ.ಸಂಸದ ಡಾ.ಸಿ.ಎನ್. ಮಂಜುನಾಥ್ ಅವರೊಂದಿಗೂ ನಾನೇ ಖುದ್ದಾಗಿ ಮಾತನಾಡಿ ಸಲಹೆ ಪಡೆದಿದ್ದೇನೆ. ಜತೆಗೆ ಸೊಳ್ಳೆ ನಿಯಂತ್ರಣಾ ಕ್ರಮ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು. 

ಡೆಂಗ್ಯೂ ಟೆಸ್ಟಿಂಗ್‌ ಬೆಲೆ ಹೆಚ್ಚಳ ಕಂಡುಬಂದರೆ ಲೈಸನ್ಸ್‌ ರದ್ದು: ಸಚಿವ ದಿನೇಶ್‌ ಗುಂಡೂರಾವ್‌

ಈ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸಿ ಅಗತ್ಯ ಬೆಡ್ ವ್ಯವಸ್ಥೆ, ಔಷಧ ವ್ಯವಸ್ಥೆಎಲ್ಲವನ್ನೂ ಮಾಡಿದ್ದೇವೆ. ಸೋಂಕಿತರು ಹಾಗೂ ಸಾವನ್ನಪ್ಪಿರುವವರ ಮಾಹಿತಿಯನ್ನೂ ಬಿಡುಗಡೆ ಮಾಡಿದ್ದೇವೆ. ಒಂದೆರಡು ಕಡೆ ಝೀಕಾ ವೈರಸ್ ಕೂಡ ಕಂಡುಬಂದಿದೆ. ಇವೆರಡೂ ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಸೋಂಕಿತ ಸೊಳ್ಳೆಗಳಿಂದಮಾತ್ರ ಹರಡುತ್ತವೆ.ಹೀಗಾಗಿ ಆತಂಕ ಸೃಷ್ಟಿಸುವುದು ಬೇಡ ಎಂದರು. ಕೊಳಗೇರಿ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ ಬಗ್ಗೆ ಮಾತನಾಡಿದ ಅವರು, 'ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು' ಎಂದು ತಿಳಿಸಿದರು.

Latest Videos
Follow Us:
Download App:
  • android
  • ios