Asianet Suvarna News Asianet Suvarna News

ಕರ್ನಾಟಕದ 2200 ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಮಳೆಯಾಗುತ್ತಿದ್ದರೂ ಬರ | 548 ಗ್ರಾಮಕ್ಕೆ ಟ್ಯಾಂಕರ್‌ನಲ್ಲಿ ನೀರು: ಸಚಿವ ಪ್ರಿಯಾಂಕ್, 2098 ಹಳ್ಳಿಗೆ ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದ ಸರ್ಕಾರ

No Drinking Water in 2200 Villages at Karnataka Says Minister Priyank Kharge grg
Author
First Published May 19, 2024, 10:56 AM IST

ಬೆಂಗಳೂರು(ಮೇ.19): ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಲ್ಲಿನ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಎಲ್ಲ ಗ್ರಾಮಗಳಿಗೂ ಆದ್ಯತೆ ಮೇರೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಹಾಗೂ 1,659 ಗ್ರಾಮಗಳಿಗೆ 2,098 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅದರಿಂದ ನೀರು ಪೂರೈಸಲಾಗುತ್ತಿದೆ. ಅದರ ಜತೆಗೆ ಉಳಿದ ಗ್ರಾಮಗಳ ಮೇಲೂ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ಆ ಗ್ರಾಮಗಳಿಗೂ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. 

ಕೋಲಾರ ಜಿಲ್ಲೆಯಲ್ಲಿ ಬತ್ತಿದ ಕೆರೆಗಳು, ನೀರಿಗೆ ತತ್ವಾರ..!

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಾಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುದಾನ ನೀಡಲಾಗಿದೆ. ಅದರ ಜತೆಗೆ ಹೆಚ್ಚುವರಿಯಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೇ ಸಾಲಿಗೆ 20 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಸದ್ಯ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸು ತ್ತಿದ್ದು, ಅದರಿಂದ 6,828 ಗ್ರಾಮಗಳಿಗೆ ನೀರು ಸರಬ ರಾಜು ಮಾಡಲಾಗುತ್ತಿದೆ. ಈ ಯೋಜನೆಗಳಲ್ಲಿ ಹೆಚ್ಚಾಗಿ ನದಿ ಆಧಾರಿತ ಮತ್ತು ಜಲಾಶಯಗಳ ಮೇಲ್ಬಾಗದಿಂದ ನೀರು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ 413 ಗ್ರಾಮ ಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಒಣಗಿದ್ದು, ಆಗ್ರಾಮಗಳಿಗೆ ಟ್ಯಾಂಕ‌ರ್ ಮತ್ತು ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 

158 ತಾಲೂಕಲ್ಲಿ ಸಮಸ್ಯೆ

ರಾಜ್ಯದಲ್ಲಿನ 158 ತಾಲೂಕುಗಳಲ್ಲಿರುವ 26,106 ಗ್ರಾಮಗಳ ಪೈಕಿ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂ 1,659 ಗ್ರಾಮಗಳಿಗೆ 2,098 ಖಾಸಗಿ ಬೋರ್‌ವೆಲ್ ಗಳನ್ನು ಬಾಡಿಗೆ ಆಧಾರದಲ್ಲಿ ಪಡೆದು ಅದರಿಂದ ನೀರು ಪೂರೈಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios