Hijab Controversy: ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ..ಮುಗಿಯದ ವಿವಾದ!

* ಮತ್ತೆ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರು
* ಪ್ರಾಂಶುಪಾಲರಿಂದ ತರಗತಿ ಪ್ರವೇಶ ನಿರಾಕರಣೆ
* * ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದ ರೇಷಮ್‌ ಎಂಬ ವಿದ್ಯಾರ್ಥಿನಿ
*  ಹಿಜಾಬ್‌ ಧರಿಸಿ ಕಾಲೇಜಿಗೆ ಬಂದರೆ ಶಿಸ್ತು ಕ್ರಮ  ಶಾಸಕ ರಘುಪತಿ ಭಟ್‌ ಎಚ್ಚರಿಕೆ

No Entry for the students who wear hijab Udupi mah

ಉಡುಪಿ(ಫೆ. 02)  ನಗರದ (Udupi) ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 6 ಮುಸ್ಲಿಂ (Muslim) ವಿದ್ಯಾರ್ಥಿನಿಯರು (Student) ಸರ್ಕಾರದ ಆದೇಶ ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ಎಚ್ಚರಿಕೆಯ ನಡುವೆಯೂ ಮಂಗಳವಾರ ಹಿಜಾಬ್‌  (Hijab)ಧರಿಸಿಕೊಂಡು ಬಂದಿದ್ದು ಪ್ರಾಂಶುಪಾಲರು ಅವರಿಗೆ ತರಗತಿ ಪ್ರವೇಶವನ್ನು ನಿರಾಕರಿಸಿದ್ದಾರೆ.

ಇದರಿಂದ ಅಸಮಾಧಾನಗೊಂಡ ಆ ಆರು ವಿದ್ಯಾರ್ಥಿನಿಯರು ಕ್ಯಾಂಪಸ್‌ನೊಳಗೆ ಕೂತು ಪ್ರತಿಭಟನೆ ನಡೆಸಿದ್ದು, ವಿವಾದ ಜೀವಂತವಾಗಿರುವಂತೆ ಮಾಡಿದ್ದಾರೆ. ಈ ವಿದ್ಯಾರ್ಥಿಗಳು ಕಳೆದೊಂದು ತಿಂಗಳಿಂದ ಕಾಲೇಜಿನ ಸಮವಸ್ತ್ರದ ಜೊತೆಗೆ ತಮ್ಮ ಧಾರ್ಮಿಕ ಉಡುಪು ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡಬೇಕು ಎಂದು ಹಠ ಹಿಡಿದಿದ್ದು, ಅವರ ತರಗತಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಾಲೇಜು ನಿಗದಿಪಡಿಸಿದ ಸಮವಸ್ತ್ರವನ್ನಷ್ಟೇ ಧರಿಸುವಂತೆ ಆದೇಶಿಸಿದೆ. ಅದರಂತೆ ಕಾಲೇಜು ಅಭಿವೃದ್ಧಿ ಸಮಿತಿಯು, ಹಿಜಾಬ್‌ ಧರಿಸಿದರೆ ಕ್ಯಾಂಪಸ್‌ ಒಳಗೆ ಬರಬೇಡಿ, ಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

ಹೈಕೋರ್ಟ್ ಮೊರೆ:  ಹಿಜಾಬ್‌ ಧರಿಸುವುದು ಸಂವಿಧಾನದ ಮೂಲಭೂತ ಹಕ್ಕೆಂದು(Fundamental Right) ಘೋಷಿಸಬೇಕು ಹಾಗೂ ಹಿಜಾಬ್‌ ಧಾರಣೆಯನ್ನು ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸುವಂತಿಲ್ಲ ಎಂದು ಆದೇಶಿಸುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು(Muslim Student) ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಈ ಕುರಿತು ರೇಷಮ್‌ ಎಂಬ ವಿದ್ಯಾರ್ಥಿನಿ ಹೈಕೋರ್ಟ್‌ಗೆ(High Court) ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲ ಶಾಂತಬಿಷ್‌ ಶಿವಣ್ಣ ವಕಾಲತ್ತು ತೆಗೆದುಕೊಂಡಿದ್ದರು. 

Hijab Controversy 'ಕಾಲೇಜಿ​​​ನಲ್ಲಿ ಹಿಜಾಬ್ ಧರಿಸುವವರಿಗೆ TC ಕೊಟ್ಟು, ಒದ್ದು ಮನೆಗೆ ಕಳಿಸಿ'

ಹಿಜಾಬ್‌ ಧರಿಸಲಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಅರ್ಜಿದಾರರು ಸೇರಿದಂತೆ ಮುಸ್ಲಿಂ(Muslim) ಹೆಣ್ಣು ಮಕ್ಕಳಿಗೆ 2021ರ ಡಿ.28ರಿಂದ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದ ಅವರು ತರಗತಿಗಳಿಗೆ ಹಾಜರಾಗಲು ಅವಕಾಶವಾಗುತ್ತಿಲ್ಲ. ಪ್ರತಿಯೊಬ್ಬರಿಗೂ ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು(Religious Rituals) ಆಚರಿಸಲು ಭಾರತೀಯ ಸಂವಿಧಾನದಲ್ಲಿ ಅವಕಾಶವಿದೆ. ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು, 

ಅಲ್ಲದೆ, ಹಿಜಾಬ್‌ ಧರಿಸುತ್ತಿರುವ ಕಾರಣಕ್ಕೆ ಕಾಲೇಜು ಪ್ರವೇಶ ನಿರ್ಬಂಧ ಹೇರಿರುವುದು ಸಂವಿಧಾನದ ನಿಯಮಗಳ ಉಲ್ಲಂಘನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಸರ್ಕಾರ(Government of Karnataka) ರಾಜಕೀಯ ಪ್ರೇರಿತವಾಗಿ ಇಂತಹ ಕ್ರಮ ಅನುಸರಿಸುತ್ತಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಹಾಗೆಯೇ, ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಹಿಜಾಬ್‌ ಧರಿಸುವುದು ಸಂವಿಧಾನದ ಕಲಂ 14 ಮತ್ತು 25ರ ಅನ್ವಯ ಮೂಲಭೂತ ಹಕ್ಕು ಎಂಬುದಾಗಿ ಘೋಷಿಸಬೇಕು. ಹಿಜಾಬ್‌ ಧಾರಣೆಯನ್ನು ಶಿಕ್ಷಣ ಸಂಸ್ಥೆಗಳು(Educational Institutions) ನಿರ್ಬಂಧಿಸುವಂತಿಲ್ಲ ಎಂದು ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸರ್ಕಾರದ ಆದೇಶ ಪಾಲಿಸಬೇಕು: ವಿದ್ಯಾರ್ಥಿಗಳು ಪ್ರಚಾರಕ್ಕಾಗಿ ಹಠ ಮಾಡುವುದು ಸರಿಯಲ್ಲ, ಹಿಜಾಬ್‌ಗೆ ನಮ್ಮ ವಿರೋಧ ಇಲ್ಲ, ಅದು ಇಸ್ಲಾಂನ ಪದ್ಧತಿ. ಆದರೆ ಶರಿಯತ್‌ ಆಧಾರಿತ ರಾಷ್ಟ್ರ ಬೇರೆ, ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ನಮ್ಮ ದೇಶದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು. ಇಂದು ಒಂದು ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನೀಯರು ಒಪ್ಪಿಕೊಂಡಿದ್ದಾರೆ ಎಂದು ಕರ್ನಾಟಕ ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿದ್ದರು. 
 

Latest Videos
Follow Us:
Download App:
  • android
  • ios