2 ವರ್ಷದಿಂದ ಅಲ್ಪಸಂಖ್ಯಾತರಿಗೆ ಅನುದಾನ ನೀಡಿಲ್ಲ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಕೊಂಡಿದ್ದು, ಇದಕ್ಕೆ ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆ (ಡಿ.21): ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ ಮಾಡಲಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಕೊಂಡಿದ್ದು, ಇದಕ್ಕೆ ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟ ಕಾರಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಿಗೆ ಸೌಲಭ್ಯ ಒದಗಿಸಲು 2018-19 ರಲ್ಲಿ 500 ಕೋಟಿ ರು., 2019-20ರಲ್ಲಿ 500 ಕೋಟಿ ರು. ಅನುದಾನವನ್ನು ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ನೀಡಲಾಗಿತ್ತು. ಆದರೆ, ಕೊರೋನಾ ಕಾರಣದಿಂದ ಎರಡು ವರ್ಷದಿಂದ ಅನುದಾನ ಬಿಡುಗಡೆ ಆಗಿರಲಿಲ್ಲ. ಇನ್ನು 2018-19, 2019-20ನೇ ಸಾಲಿನಲ್ಲಿ ಮಂಜೂರಾಗಿರುವ ಅನುದಾನ ಬಿಡುಗಡೆಯೂ ಬಾಕಿ ಇದೆ ಎಂದು ಹೇಳಿದರು.
ಮಂತ್ರಿಗಿರಿ ಸ್ಥಾನ ಬಗ್ಗೆ ಸಿಎಂ ಬೊಮ್ಮಾಯಿ ಭರವಸೆ: ಈಶ್ವರಪ್ಪ ಶಾಂತ
2018-19ನೇ ಸಾಲಿನ ಅನುದಾನದಲ್ಲಿ ವರುಣ ಕ್ಷೇತ್ರಕ್ಕೆ 5 ಕೋಟಿ ರು. ಮಂಜೂರು ಮಾಡಿ ಮೊದಲ ಕಂತಾಗಿ 1.25 ಕೋಟಿ ರು. ಹಾಗೂ 2019-20ನೇ ಸಾಲಿನಲ್ಲಿ ಎರಡನೇ ಕಂತಾಗಿ 2.5 ಕೋಟಿ ರು. ಬಿಡುಗಡೆ ಮಾಡಲಾಗಿದೆ. 2020-21 ಹಾಗೂ 2021-22ರಲ್ಲಿ ಯಾವುದೇ ಅನುದಾನ ನೀಡಿಲ್ಲ. ಹೀಗಾಗಿ, 2018-19, 2019-20ರಲ್ಲಿ ಮಂಜೂರಾಗಿ ಪೂರ್ಣಗೊಳ್ಳಲು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 102 ಕೋಟಿ ರು. ವಿಶೇಷ ಅನುದಾನ ಬಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಾಮಾನ್ಯ ಚಟುವಟಿಕೆಗಳು ಮುಂದುವರೆದಿವೆ ಎಂದು ತಿಳಿದುಬಂದಿದೆ.
ಬಿಜೆಪಿ ಸರ್ಕಾರದಿಂದ ಸಾಮಾಜಿಕ ನ್ಯಾಯ: ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎನ್ನುವ ವಿನೂತನ ಕಾರ್ಯಕ್ರಮ ಜನಸಾಮಾನ್ಯರÜಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ ಎಂದು ಸಚಿವ ಹಾಲಪ್ಪ ಆಚಾರ ಹೇಳಿದರು. ತಾಲೂಕಿನ ತೊಂಡಿಹಾಳ ಗ್ರಾಮದಲ್ಲಿ ತಹಸೀಲ್ದಾರ್ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಪರ ಆಡಳಿತವನ್ನು ನೀಡುವ ಮೂಲಕ ನಾಡಿನ ಜನತೆಯ ವಿಶ್ವಾಸವನ್ನು ಗಳಿಸಿದ್ದಾರೆ ಎಂದರು.
ಗ್ರಾಮೀಣ ಪ್ರದೇಶದ ಜನರ ಹಲವಾರು ಸಮಸ್ಯೆಗಳಿಗೆ ಈ ಕಾರ್ಯಕ್ರಮ ಶಾಶ್ವತ ಪರಿಹಾರ ನೀಡುವ ಮೂಲಕ ಅವರ ನೆಮ್ಮದಿ ಬದುಕಿಗೆ ಆಶಾಕಿರಣವಾಗಿದೆ. ಈ ಹಿಂದೆ ಚುನಾವಣೆಯಲ್ಲಿ ಕೊಟ್ಟಮಾತಿನಂತೆ ತಾಲೂಕಿನ ಕೆರೆ ತುಂಬಿಸುವ ಯೋಜನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಕಳೆದ ನಾಲ್ಕು ದರ್ಶಕಗಳಿಂದಲೂ ಎಸ್ಸಿ ಮತ್ತು ಎಸ್ಟಿಸಮಾಜಕ್ಕೆ ಮೀಸಲಾತಿ ಹೆಚ್ಚಿಸುವ ಕೆಲಸ ಹಿಂದಿನ ಸರ್ಕಾರಗಳು ಮಾಡಲಿಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ದೊರಕಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.
ಸಂಕ್ರಾಂತಿಗೆ ವಿದ್ಯುತ್ ಮಗ್ಗ ನೇಕಾರರಿಗೂ 5000 ರು.: ಸಿಎಂ ಬೊಮ್ಮಾಯಿ
ತಹಸೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ, ನರೇಗಾ ಯೋಜನೆಯಡಿ ಕೆಲವರು ಹೊಸದಾಗಿ ಜಾಬ್ ಕಾರ್ಡ್ ಪಡೆದುಕೊಂಡಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕರು ತಮ್ಮ ಶಾಲೆಗೆ ತಡೆಗೋಡೆ, ಆಟದ ಮೈದಾನ, ಅಡುಗೆ ಕೋಣೆ, ಶೌಚಾಲಯ ನಿರ್ಮಿಸಿಕೊಡಲು ಅರ್ಜಿ ಸಲ್ಲಿಸಿದರು. ಹಾಗೇ ಕಾರ್ಮಿಕರಿಗೆ ಉಚಿತವಾಗಿ ಇ-ಶ್ರಮ ಕಾರ್ಡ್, ಅಬಾ ಕಾರ್ಡ್‌ಗಳನ್ನು ಗ್ರಾಪಂ ಕಂಪ್ಯೂಟರ್ ಆಪರೇಟರ್ ಮಾಡಿಕೊಟ್ಟರು. ಈ ಬಾರಿ ಹೊಸದಾಗಿ ದನದೊಡ್ಡಿ, ಬದು, ಕೃಷಿಹೊಂಡ ಕಾಮಗಾರಿಗಳನ್ನು ನಿರ್ಮಿಸಿಕೊಳ್ಳಲು ಅರ್ಜಿ ಪಡೆಯಲಾಯಿತು ಎಂದರು.