ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಡಿಸಿಎಂ ಲಕ್ಷ್ಮಣ್ ಸವದಿ

ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಸುದ್ದಿಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

No hike in bus fares clarified By DCM Laxman Savadi rbj

ಬೆಂಗಳೂರು, (ಫೆ.02): ಈಗಾಗಲೇ ಕೊರೋನಾ ನಂತ್ರದಿಂದ ಉಂಟಾದಂತ ಆರ್ಥಿಕ ನಷ್ಟಕ್ಕೆ ರಾಜ್ಯದ ಜನರು ನಲುಗಿ ಹೋಗಿದ್ದಾರೆ. ಇದರ ಮಧ್ಯೆ ಕೇಂದ್ರ ಸರ್ಕಾರ 2021ರ ಬಜೆಟ್‌ನಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್‌ ಏರಿಕೆ ಮಾಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡುತ್ತಿದ್ದವು. ಆದ್ದರಿಂದ ಇದಕ್ಕೆ ಸಂಬಂಧಿಸಿದಂತೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

Budget 2021: ಪೆಟ್ರೋಲ್, ಡೀಸೆಲ್ ಮೇಲೆ ಕೃಷಿ ಸೆಸ್: ನಾಳೆಯಿಂದಲೇ ಜಾರಿ!

ಸಾರಿಗೆ ಬಸ್ ಪ್ರಯಾಣದರ ಸದ್ಯಕ್ಕೆ ಏರಿಕೆ ಮಾಡುತ್ತಿಲ್ಲ ಎಂಬುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳುವ ಮೂಲಕ, ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಶಾಸಕರು ಕೇಳಲಾದಂತ ಪ್ರಶ್ನೆಗೆ ಉತ್ತರಿಸಿದ ಸವದಿ, ಸಾರಿಗೆ ಬಸ್ ಪ್ರಯಾಣದರ ಸದ್ಯಕ್ಕೆ ಏರಿಕೆ ಮಾಡುತ್ತಿಲ್ಲ. ಸಾರಿಗೆ ಬಸ್ ದರ ಹೆಚ್ಚಳದ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದರು. ಈ ಮೂಲಕ  ಸಾರಿಗೆ ಬಸ್ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

Latest Videos
Follow Us:
Download App:
  • android
  • ios