ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ? ಇಲ್ಲಿದೆ ಸತ್ಯಾಸತ್ಯತೆ!

ಮಹಾಮಾರಿ ಕರೊನಾ ಪ್ರಕರಣಗಳು ದೇಶಾದ್ಯಂತ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿ ಎನ್ನುವ ವಿಡಿಯೋ ವೈರಲ್ ಆಗುತ್ತಿದೆ. ಆ ವಿಡಿಯೋ ಅಸಲಿಯತ್ತು ಇಲ್ಲಿದೆ.

No Lockdown In Karnataka Says CM BSY and minister Sudhakar rbj

ಬೆಂಗಳೂರು, (ಮಾ.17): ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. 

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತೆ ಎನ್ನುವ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಅಲ್ಲದೇ ಈ ಬಗ್ಗೆ ಹಳ್ಳಿಗಳಲ್ಲಿ ಸುದ್ದಿ ಹರಿದಾಡುತ್ತಿದೆ.

ರಾಜ್ಯದಲ್ಲಿ ನೈಟ್‌ ಕರ್ಫ್ಯೂ, ಲಾಕ್‌ಡೌನ್ ಇಲ್ಲ: ಆದ್ರೆ ಕೇಂದ್ರದಿಂದ 3 ಪ್ರಮುಖ ಸಲಹೆ

ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ  ಯಾವುದೇ ಸಭೆ ಸಮಾರಂಭಕ್ಕೆ ಅವಕಾಶವಿಲ್ಲ. ಕಾರ್ಯಕ್ರಮಗಳನ್ನು ಕೂಡ ರದ್ದು ಪಡಿಸಲಾಗಿದೆ.  ಒಂದು ವಾರ ಸಂಪೂರ್ಣ ಲಾಕ್ ಡೌನ್ ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎನ್ನುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯ ವೀಡಿಯೋ ವೈರಲ್ ಆಗುತ್ತಿದೆ. 

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದ್ಯಾ ಎನ್ನುವ ಗೊಂದಲಕ್ಕೂ ಅನೇಕರು ಒಳಗಾಗಿದ್ದಾರೆ. ಆದ್ರೆ, ಈ ವೀಡಿಯೋ ಹಳೇಯದಾಗಿದೆ.

ಯಾವುದೇ ನೈಟ್ ಕರ್ಫ್ಯೂ ಅಥವಾ ಲಾಕ್‌ಡೌನ್ ಸದ್ಯಕ್ಕೆ ಇಲ್ಲ ಎಂದು ಸಿಎಂ ಹಾಗೂ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಜನರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ.. ಯಾವುದೇ ಆತಂಕಪಡಬೇಕಿಲ್ಲ. ಕಡ್ಡಾಯವಾಗಿ ಮಾಸ್ಕ್ ಧರಸಿ ಕೊರೋನಾ ನಿಯಮಗಳನ್ನು ಪಾಲಿಸಿದ್ರೆ ಸಾಕು.

Latest Videos
Follow Us:
Download App:
  • android
  • ios