ಎಷ್ಟೇ ಎತ್ತರಕ್ಕೇರಿದರೂ ನಮ್ಮ ಮೂಲ ಬೇರನ್ನು ಮರೆಯಬಾರದು: ಹೆಬ್ಬಾಳ್ಕರ್

ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಮೂಲ ಬೇರನ್ನು ಮರೆಯಬಾರದು ಎಂದು ರಾಜ್ಯ ಮಹಿಳಾ ಮತ್ತ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

No matter how high we rise we must not forget our root say Hebbalkar at belgum rav

ಬೆಳಗಾವಿ (ಸೆ.5): ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಮೂಲ ಬೇರನ್ನು ಮರೆಯಬಾರದು ಎಂದು ರಾಜ್ಯ ಮಹಿಳಾ ಮತ್ತ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ದೇವಸ್ಥಾನದ 9ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಜಾತ್ರಾ‌ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ಮಾತನಾಡಿದ ಅವರು, ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಭಿವೃದ್ಧಿ ವಿಷಯದಲ್ಲೂ ನನ್ನ ಮೊದಲ ಆದ್ಯತೆ ಗ್ರಾಮೀಣ ವಿಧಾನಸಭಾ ಕ್ಷೇತ್ರವೇ ಆಗಿದೆ ಎಂದರು.

ಶಕ್ತಿ ಯೋಜನೆಯ ಉಚಿತ ಬಸ್‌ಗಳನ್ನು ಕಿತ್ತುಕೊಂಡ ಗೃಹಲಕ್ಷ್ಮಿ:ನಾಳೆ ಊರಿಗೆ ಹೋಗೋರಿದ್ರೆ ಕ್ಯಾನ್ಸಲ್‌ ಮಾಡಿ

ಕ್ಷೇತ್ರದ ಮೇಲಿನ ನನ್ನ ಪ್ರೀತಿ ಮತ್ತು ನನ್ನ ಮೇಲಿನ ಕ್ಷೇತ್ರದ ಜನರ ಪ್ರೀತಿ ಎರಡನ್ನೂ ಲೆಕ್ಕ ಹಾಕಲು ಸಾಧ್ಯವಿಲ್ಲ. ಹಾಗಾಗಿ ಇಡೀ ರಾಜ್ಯದ ಜವಾಬ್ದಾರಿ ನನ್ನ ಮೇಲಿದ್ದರೂ ಗ್ರಾಮೀಣ ಕ್ಷೇತ್ರದ ಮೇಲಿನ ತುಡಿತ ನಿರಂತರವಾಗಿರುತ್ತದೆ ಎಂದು ತಿಳಿಸಿದರು. ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಚಂಬಣ್ಣ ನಾವಲಗಿ, ಸ್ಮಿತಾ ಪಾಟೀಲ, ಪುಷ್ಪ ದೊಡನಾಯ್ಕರ್, ಗೌರವ್ವ ಬ.ಪಾಟೀಲ, ಮೀರಾ ನದಾಫ್, ಸಿ.ಸಿ.ಪಾಟೀಲ, ಅಡಿವೇಶ ಇಟಗಿ, ಸ್ವಾತಿ ಇಟಗಿ, ಶ್ರೀಕಾಂತ್ ಮಾದುಭರಮಣ್ಣವರ, ಚಂದ್ರಪ್ಪ ನಾವಲಗಿ ಮುಂತಾದವರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios