Asianet Suvarna News Asianet Suvarna News

'ರಾಜ್ಯದ ಯಾವುದೇ ದೇಗುಲ ತೆರವಿಲ್ಲ'

* ದೇವಸ್ಥಾನಗಳ ತೆರವು ತಡೆಗೆ ಇಂದು ಸಂಪುಟ ನಿರ್ಣಯ?

* ರಾಜ್ಯದ ಯಾವುದೇ ದೇಗುಲ ತೆರವಿಲ್ಲ: ಎಸ್‌ಟಿಎಸ್‌

No More Temples will Be Demolished Says ST Somashekhar pod
Author
Bangalore, First Published Sep 20, 2021, 7:36 AM IST
  • Facebook
  • Twitter
  • Whatsapp

ಬೆಂಗಳೂರು(ಸೆ.20): ಸಾಕಷ್ಟು ವಿವಾದ ಹುಟ್ಟು ಹಾಕಿರುವ ರಾಜ್ಯದಲ್ಲಿನ ಅನಧಿಕೃತ ದೇವಸ್ಥಾನಗಳ ತೆರವು ವಿಚಾರ ಸೋಮವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು, ಇನ್ನು ಮುಂದೆ ದೇವಸ್ಥಾನಗಳನ್ನು ತೆರವುಗೊಳಿಸುವುದಿಲ್ಲ ಎಂಬ ನಿರ್ಣಯ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಳಗ್ಗೆ 9 ಗಂಟೆಗೆ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಹೋದ್ಯೋಗಿಗಳ ಅಭಿಪ್ರಾಯ ಸಂಗ್ರಹಿಸಿ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ದೇವಾಲಯ ತೆರವುಗೊಳಿಸುವುದಿಲ್ಲ. ಈ ಬಗ್ಗೆ ಸೋಮವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ತೆರವು ವಿಚಾರವಾಗಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ ಆದೇಶ ಇತ್ತು. ಇದರ ಜತೆಗೆ ಮೈಸೂರು ಜಿಲ್ಲೆಯ ಅಧಿಕಾರಿಗಳಿಂದಲೂ ತೆರವು ವಿಚಾರದಲ್ಲಿ ತಪ್ಪಾಗಿದೆ. ಇನ್ನು ಮುಂದೆ ಯಾವುದೇ ದೇವಾಲಯ ತೆರವುಗೊಳಿಸುವುದಿಲ್ಲ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಆದೇಶ ಮಾಡಲಿದ್ದಾರೆ ಎಂದರು.

Follow Us:
Download App:
  • android
  • ios