ಬೆಂಗಳೂರು(ಡಿ. 05): ರಾಜ್ಯದಲ್ಲಿ ರಾತ್ರಿ ಕಫä್ರ್ಯ ಜಾರಿಗೊಳಿಸುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

"

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಥ ಯಾವುದೇ ಚಿಂತನೆಯನ್ನು ಸರ್ಕಾರ ನಡೆಸುತ್ತಿಲ್ಲ. ಸರ್ಕಾರದ ಮುಂದೆ ಪ್ರಸ್ತಾಪವೂ ಇಲ್ಲ ಎಂದು ಹೇಳಿದರು.

ಎಚ್ಚರ ತಪ್ಪಿದ್ರೆ ಕಾದಿದೆ ಆಪತ್ತು: ಕೊರೋನಾ ಸೋಂಕು ಮತ್ತೆ ಏರಿಕೆ..!

ಇದೇ ವೇಳೆ ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕಫä್ರ್ಯ ವಿಧಿಸಬೇಕು ಎಂದು ತಾಂತ್ರಿಕ ಸಲಹಾ ಸಮಿತಿ ಶಿಫಾರಸು ಮಾಡಿಲ್ಲ. ಹೀಗಾಗಿ ಸದ್ಯಕ್ಕೆ ಕಫä್ರ್ಯ ಪ್ರಸ್ತಾಪವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಎರಡನೇ ಅಲೆ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳಿಗೆ ಸಮಿತಿ ಶಿಫಾರಸು ಮಾಡಿದೆ. ಕೊರೋನಾ ನಿಯಂತ್ರಣ ಮಾರ್ಗಸೂಚಿಯನ್ನು ಜನರು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡಬೇಕು ಎಂದು ಹೇಳಿದೆ. ಆದರೆ ಕಫä್ರ್ಯ ಅಥವಾ ರಾತ್ರಿ ಕಫä್ರ್ಯ ಬಗ್ಗೆ ವರದಿಯಲ್ಲಿ ಉಲ್ಲೇಖವೇ ಇಲ್ಲ. ಹೀಗಾಗಿ ಸದ್ಯಕ್ಕೆ ಕಫä್ರ್ಯ ಪ್ರಸ್ತಾಪ ಬಂದಿಲ್ಲ ಎಂದು ತಿಳಿಸಿದರು.

ವರ್ಷಾಚರಣೆ ರದ್ದು ಸಂಬಂಧ ಸಿಎಂಗೆ ಮನವಿ: ಅಶೋಕ್‌

ಡಿ.31ರ ರಾತ್ರಿ ಹೊಸ ವರ್ಷಾಚರಣೆ ರದ್ದು ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ. ಈ ಕುರಿತು ಶನಿವಾರ ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

2ನೇ ಅಲೆ ಭೀತಿ, ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಮತ್ತೊಂದು ರಾಜ್ಯ!

ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಸಭೆಯಲ್ಲೂ ರಾತ್ರಿ ಕಫä್ರ್ಯ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಆದರೆ, ಡಿ.31ರ ರಾತ್ರಿ ಹೊಸ ವರ್ಷಾಚರಣೆ ರದ್ದು ಮಾಡುವ ಬಗ್ಗೆ ಸಭೆ ನಡೆದಿದೆ. ಕೋವಿಡ್‌ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆ ವಿಚಾರವಾಗಿ ಈ ಸಭೆ ನಡೆಸಲಾಗಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾನೂ ಆ ಸಭೆಯಲ್ಲಿ ಭಾಗವಹಿಸಿದ್ದೆ. ಕೋವಿಡ್‌ ಎರಡನೇ ಅಲೆ ತಡೆಯುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹಾಗಾಗಿ ಡಿ.31ರ ರಾತ್ರಿ ಹೊಸ ವರ್ಷಾಚರಣೆ ರದ್ದು ಮಾಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೇವೆ ಎಂದರು.

ಡಿ.31ರ ರಾತ್ರಿ ಬ್ರಿಗೇಡ್‌ ರಸ್ತೆ, ಎಂ.ಜಿ. ರಸ್ತೆಯಲ್ಲಿ ಕುಣಿದಾಟ ಇರುವುದಿಲ್ಲ. ಮನೆಯೊಳಗೆ ಬಂಧುಗಳು, ಸ್ನೇಹಿತರ ಜೊತೆ ಆಚರಣೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಅಶೋಕ್‌, ಅಂದು ಬಾರ್‌, ರೆಸ್ಟೋರೆಂಟ್‌, ಪಬ್‌ಗಳು ತೆರೆದಿರುತ್ತವೆ. ಆದರೆ, ಶೇ.50ರಷ್ಟುಗ್ರಾಹಕರಿಗೆ ಮಾತ್ರ ಅವಕಾಶ ನೀಡುವ ಉದ್ದೇಶವಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೊತೆ ಚರ್ಚಿಸಿ, ಶನಿವಾರ ಘೋಷಣೆ ಮಾಡುತ್ತೇವೆ ಎಂದು ಹೇಳಿದರು.