ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ರಾಜಕೀಯ ಪ್ರೇರಿತ. ಪ್ರಕರಣದಲ್ಲಿ ಪ್ರಿಯಾಂಕ್‌ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳೂ ಇಲ್ಲ. ಜತೆಗೆ ಪ್ರಕರಣದಲ್ಲಿ ಯಾವುದೇ ವಿಚಾರಣೆಗೂ ತಾವು ಸಿದ್ಧ ಎಂದು ಪ್ರಿಯಾಂಕ್‌ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 
 

No question of Resignation for Priyank Kharge Says CM Siddaramaiah grg

ಬೆಂಗಳೂರು(ಜ.02): ‘ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳೂ ಇಲ್ಲ. ಇದು ರಾಜಕೀಯ ದ್ವೇಷದಿಂದ ಮಾಡುತ್ತಿರುವ ಆರೋಪ ಆಗಿರುವುದರಿಂದ ಪ್ರಿಯಾಂಕ್‌ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ರಾಜಕೀಯ ಪ್ರೇರಿತ. ಪ್ರಕರಣದಲ್ಲಿ ಪ್ರಿಯಾಂಕ್‌ ಪಾತ್ರವಿಲ್ಲ, ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳೂ ಇಲ್ಲ. ಜತೆಗೆ ಪ್ರಕರಣದಲ್ಲಿ ಯಾವುದೇ ವಿಚಾರಣೆಗೂ ತಾವು ಸಿದ್ಧ ಎಂದು ಪ್ರಿಯಾಂಕ್‌ ಹೇಳಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ಕಲಬುರಗಿಗೆ ಬರೋವಾಗ ಹೋಮ್‌ವರ್ಕ್‌ ಮಾಡ್ಕೊಂಡು ಬನ್ನಿ: ಸಚಿವ ಪ್ರಿಯಾಂಕ್‌ ಖರ್ಗೆ

ಇಂಥದ್ದೇ ಪ್ರಕರಣದಲ್ಲಿ ಹಿಂದೆ ಬಿಜೆಪಿ ಕೆ.ಎಸ್‌.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆದಿರಲಿಲ್ಲವೇ? ಎಂಬ ಪ್ರಶ್ನೆಗೆ, ‘ಆಗ ಗುತ್ತಿಗೆದಾರನ ಡೆತ್‌ನೋಟ್‌ನಲ್ಲಿ ಈಶ್ವರಪ್ಪ ಹೆಸರು ಬರೆದಿದ್ದರು. ಈಗ ಈ ಗುತ್ತಿಗೆದಾರನ ಡೆತ್‌ನೋಟ್‌ನಲ್ಲಿ ಪ್ರಿಯಾಂಕ್‌ ಹೆಸರು ಇದೆಯಾ? ಪ್ರಿಯಾಂಕ್‌ ಖರ್ಗೆ ಹೆಸರು ಎಲ್ಲೂ ಇಲ್ಲ. ಜತೆಗೆ ಅವರು ಎಲ್ಲಾ ತನಿಖೆಗೂ ಸಿದ್ಧ ಎಂದು ಹೇಳಿದ್ದಾರೆ. ಹೀಗಾಗಿ ಮೊದಲು ಸಿಐಡಿ ತನಿಖೆ ನಡೆಸಿ ವರದಿ ಕೊಡಲಿ’ ಎಂದು ಹೇಳಿದರು.

ಬಿಜೆಪಿ ಸಿಬಿಐಗೆ ವಹಿಸಿಲ್ಲ:

ಬಿಜೆಪಿಯವರು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಈಗ ಸಿಬಿಐ ತನಿಖೆ ಬೇಕು ಎನ್ನಲು ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಗುತ್ತಿಗೆದಾರ ಸಚಿನ್‌ ಪಾಂಚಾಳ ಎಂಬುವರು ಪ್ರಿಯಾಂಕ್‌ ಖರ್ಗೆ ಆಪ್ತನೊಬ್ಬ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೀಗಾಗಿ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹಿಸುತ್ತಿದೆ.

ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಲಬುರಗಿ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ. ಸಚಿನ್‌ ಆತ್ಮಹತ್ಯೆ ಪತ್ರದಲ್ಲಿ ಪ್ರಿಯಾಂಕ್‌ ಖರ್ಗೆ ವಿರುದ್ಧ ನೇರ ಆರೋಪ ಮಾಡಿಲ್ಲ, ಬೇರೆಯವರ ಮೇಲೆ ಆರೋಪ ಬಂದಿದ್ದಕ್ಕೆ ಪ್ರಿಯಾಂಕ್‌ ರಾಜೀನಾಮೆ ನೀಡುವ ಅಗತ್ಯವಿಲ್ಲ. ಅವರ ಪ್ರಾಮಾಣಿಕತೆ ನಮಗೆ ತಿಳಿದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. 

ಸಚಿನ್‌ ಆತ್ಮಹತ್ಯೆ ಕೇಸ್‌: ಸಚಿವ ಖರ್ಗೆ, ಆಂದೋಲಾ ಶ್ರೀ ಟ್ವೀಟ್‌ ಸಮರ!

ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗುತ್ತಿದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿ ಪ್ರಿಯಾಂಕ್‌ ಖರ್ಗೆ ವಿರುದ್ಧ ಆರೋಪ ಮಾಡಿದ ಕೂಡಲೇ ಅವರು ರಾಜೀನಾಮೆ ನೀಡಲು ಸಾಧ್ಯವಿಲ್ಲ.  ಪ್ರಿಯಾಂಕ್‌ ಖರ್ಗೆ ಅವರ ಪ್ರಮಾಣಿಕತೆ ಬಗ್ಗೆ ನಮಗೆ ತಿಳಿದಿದೆ. ಪ್ರಕರಣದಲ್ಲಿ ಅವರ ಪಾತ್ರವಿಲ್ಲ. ಗುತ್ತಿಗೆದಾರನ ಸಾವಿನ ಕುರಿತು ಕಾನೂನು ಪ್ರಕಾರ ತನಿಖೆ ನಡೆಯಲಿ ಎಂದರು. ಸಚಿನ್‌ ಸಾವಿಗೆ ಕಾರಣವಾಗಿರುವ ಆರೋಪ ಹೊತ್ತಿರುವ ರಾಜು ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಇರುವ ಫೋಟೋಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಡುಗಡೆ ಮಾಡಿರುವ ಕುರಿತು ಇದೇ ವೇಳೆ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ, ಯಡಿಯೂರಪ್ಪ ಅವರು ಕ್ರಿಮಿನಲ್‌ಗಳು, ರೌಡಿಗಳು ಸೇರಿ ಹಲವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಅವನ್ನೆಲ್ಲ ನಾನು ಬಿಡುಗಡೆ ಮಾಡಲೇ? ಅವರಿಗೆ ಬೇಕು ಎಂದರೆ ಅದನ್ನು ಬಿಡುಗಡೆ ಮಾಡುತ್ತೇನೆ. ಆರೋಪಿಗಳು ಮತ್ತು ನಮ್ಮ ಜತೆ ಮಾತುಕತೆ ನಡೆದಿರುವುದು, ವ್ಯವಹಾರ ಮಾಡಿರುವ ದಾಖಲೆಗಳಿದ್ದರೆ ಆರೋಪ ಮಾಡಲಿ. ನಾವು ಸ್ವಚ್ಛ ಆಡಳಿತ ನೀಡುತ್ತಿದ್ದು, ವಿರೋಧ ಪಕ್ಷದವರು ಸುಮ್ಮನೆ ಮಾತನಾಡಬೇಕು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಪ್ರಿಯಾಂಕ್‌ ಮೇಲೆ ಅಸೂಯೆ: ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ಯಾವ ತಪ್ಪು ಮಾಡಿದ್ದಾರೆಂದು ರಾಜೀನಾಮೆ ನೀಡಬೇಕು? ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಧ್ವನಿ. ಅವರ ಮೇಲಿನ ಅಸೂಯೆಯಿಂದ ವಿರೋಧ ಪಕ್ಷದ ನಾಯಕರು ಆರೋಪ ಮಾಡುತ್ತಿದ್ದಾರೆ. ದಲಿತ ಸಮುದಾಯದ ನಾಯಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗದೆ ಸಂಚು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios