Asianet Suvarna News Asianet Suvarna News

ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗೆ ಕೇಂದ್ರದ ಸ್ಪಂದನೆ ಇಲ್ಲ: ಸಚಿವ ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ಪತ್ರ ಬರೆದಿದ್ದಾರೆ. ಇದೀಗ ಎಸ್‌ಐಟಿ ಕೂಡ ಪತ್ರದ ಮೂಲಕ ಕೋರಿದೆ. ಆದರೆ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಪ್ರತಿಕ್ರಿಯೆಯೂ ಬಂದಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್‌

No Response from the Central Government on the Cancel of Prajwal Revanna's Passport grg
Author
First Published May 23, 2024, 6:00 AM IST

ಬೆಂಗಳೂರು(ಮೇ.23):  ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದರೂ ಕೇಂದ್ರ ಸರ್ಕಾರ ಅದಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಕ್ರಿಯೆ ನಡೆಸದೇ ನಿರ್ಲಕ್ಷ್ಯ ವಹಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ಪತ್ರ ಬರೆದಿದ್ದಾರೆ. ಇದೀಗ ಎಸ್‌ಐಟಿ ಕೂಡ ಪತ್ರದ ಮೂಲಕ ಕೋರಿದೆ. ಆದರೆ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಪ್ರತಿಕ್ರಿಯೆಯೂ ಬಂದಿಲ್ಲ. ಕೇಂದ್ರ ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ. ಪ್ರಜ್ವಲ್‌ ವಿರುದ್ಧ ವಾರೆಂಟ್‌ ಜಾರಿ ಮಾಡಲಾಗಿದ್ದು, ಅವರ ಪಾಸ್‌ಪೋರ್ಟ್‌ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದರು.

ಕೇಂದ್ರ ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದುಪಡಿಸಲಿ: ಗೃಹ ಸಚಿವ ಪರಮೇಶ್ವರ್‌

ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಆಡಿಯೋ ವಿಚಾರವಾಗಿ ಎಚ್‌.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್‌ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ಅಂದುಕೊಂಡಂತೆ ತನಿಖೆಗೆ ಮಾಡಬೇಕು ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೊನೆಗೂ ಅಂಜಲಿ‌ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಪರಮೇಶ್ವರ್‌

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಾಗಿಲ್ಲ

ಪಕ್ಷದ ಅಧ್ಯಕ್ಷರ ಬದಲಾವಣೆ ಕುರಿತಂತೆ ಈವರೆಗೆ ಯಾವುದೇ ಚರ್ಚೆಯಾಗಿಲ್ಲ. ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್‌ ನಿರ್ಧರಿಸಿದರೆ ಮಾತ್ರ ಬದಲಾವಣೆಯಾಗುತ್ತದೆ. ಇಲ್ಲದಿದ್ದರೆ ಇಲ್ಲ ಎಂದು ಪರಮೇಶ್ವರ್‌ ಅಭಿಪ್ರಾಯಪಟ್ಟರು.

ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಈ ಹಿಂದೆಯೇ ಪತ್ರ ಬರೆದಿದ್ದಾರೆ. ಇದೀಗ ಎಸ್‌ಐಟಿ ಕೂಡ ಪತ್ರದ ಮೂಲಕ ಕೋರಿದೆ. ಆದರೆ, ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಪ್ರತಿಕ್ರಿಯೆಯೂ ಬಂದಿಲ್ಲ. 

Latest Videos
Follow Us:
Download App:
  • android
  • ios