ಬೆಂಗಳೂರು(ಜ.18): ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ವಾರ್ಷಿಕೋತ್ಸವ ಸಮಾರಂಭಗಳಲ್ಲಿ ಸಿನಿಮಾ ಹಾಡಾಗಲಿ ಅಥವಾ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುವುದಾಗಲಿ ಮಾಡುವಂತಿಲ್ಲ.

ಸಿನಿಮಾ ಹಾಡುಗಳಿಂದ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ಈ ನಿಯಮ ಜಹಾರಿಗೆ ತರಲಾಗುತ್ತಿದೆ. ಈ ನಿಯಮ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಅನ್ವಯಿಸಲಿದೆ.

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಕ್ಕಳು ಇತಿಹಾಸ, ದೇಶಭಕ್ತಿ, ಸಂಸ್ಕೃತಿ ಹಾಗೂ ದೇಶದ ಪರಂಪರೆ ಸಾರುವ ಹಾಡುಗಳನ್ನು  ಹಾಡಿ ಡ್ಯಾನ್ಸ್ ಹಾಗೂ ಡ್ರಾಮಾ ಮಾಡಬೇಕು, ಈಗಾಗಲೇ ಕೆಲ ಶಾಲೆಗಳಲ್ಲಿ ಇದನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಈ ಅಧಿಕಾರಿ ಮಾಹಿತಿ ನೀಡಿದ್ದಾರೆ.