ಬೆಂಗಳೂರು [ನ.29]:  ಹಿಂಗಾರು ಮಾರುತಗಳು ಚುರುಕುಗೊಂಡ ಹಿನ್ನೆಲೆಯಲ್ಲಿ ಡಿಸೆಂಬರ್‌ ಆರಂಭದಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಗುರುವಾರ ಬೆಂಗಳೂರಿನ ಹಲವು ಭಾಗದಲ್ಲಿ ತುಂತುರು ಮಳೆಯಾಗಿದ್ದು, ರಾಜ್ಯದ ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇತ್ತು. ಉಷ್ಣಾಂಶದಲ್ಲಿ ಭಾರಿ ಪ್ರಮಾಣದ ಏರಿಳಿತ ಉಂಟಾಗಿಲ್ಲ. ಸಾಧಾರಣವಾಗಿ ಇರುವಂತೆ ಕನಿಷ್ಠ 17ರಿಂದ 18 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಬೆಂಗಳೂರು ನಗರದಲ್ಲಿ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ಮಾಹಿತಿ ನೀಡಿದ್ದಾರೆ. 

ರಾಜ್ಯದ ಇಲ್ಲೆಲ್ಲಾ 3 ದಿನ ಮಳೆ : ಹವಾಮಾನ ಇಲಾಖೆ...

ಮುಂದಿನ ನಾಲ್ಕೈದು ದಿನ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಕೆಲವೆಡೆ ತುಂತುರು ಮತ್ತು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಡಿ.1ರಂದು ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಕಂಡುಬರುತ್ತಿದೆ ಎಂದಿದ್ದಾರೆ.