ತಮಿಳುನಾಡು ಸರ್ಕಾರಕ್ಕೆ ವಾಸ್ತವಾಂಶ ಗೊತ್ತಿಲ್ಲ ಎಂದು ಕಾಣಿಸುತ್ತಿದೆ. ಅವರೆಲ್ಲರೂ ನಮಗೆ ಸಹೋದರರಂತೆ. ಅಲ್ಲಿಯವರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಏನೇ ಸಮಸ್ಯೆ ಇದ್ದರೂ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ಆಸೆ. ಆ ಬಗ್ಗೆ ತಮಿಳುನಾಡು ಸರ್ಕಾರದ ಗಮನಕ್ಕೂ ತರುತ್ತೇವೆ: ಡಿ.ಕೆ. ಶಿವಕುಮಾರ್‌ 

ಬೆಂಗಳೂರು(ಜು.02): ತಮಿಳುನಾಡಿಗೆ ಕಾವೇರಿ ನೀರು ಬಿಡದ ವಿಚಾರವಾಗಿ ತಮಿಳುನಾಡು ಸರ್ಕಾರದೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಕುಮಾರಕೃಪ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನೀರಿನ ವಿಚಾರವಾಗಿ ತಮಿಳುನಾಡಿನ ಜತೆಗೆ ಜಗಳ ಆಡಲು ನಮಗೆ ಇಷ್ಟವಿಲ್ಲ. ಸುಪ್ರೀಂಕೋರ್ಟ್‌ ಆದೇಶವನ್ನು ಪಾಲಿಸುತ್ತೇವೆ ಅಂತ ಹೇಳಿದ್ದಾರೆ. 

ಕಾವೇರಿ ತಟದಲ್ಲಿ ಪ್ರವಾಹ ಉಂಟಾಗದಂತೆ ಎಚ್ಚರ ವಹಿಸಿ: ಶಾಸಕ ಮಂಥರ್‌ ಗೌಡ

ತಮಿಳುನಾಡು ಸರ್ಕಾರಕ್ಕೆ ವಾಸ್ತವಾಂಶ ಗೊತ್ತಿಲ್ಲ ಎಂದು ಕಾಣಿಸುತ್ತಿದೆ. ಅವರೆಲ್ಲರೂ ನಮಗೆ ಸಹೋದರರಂತೆ. ಅಲ್ಲಿಯವರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲಿಯವರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಏನೇ ಸಮಸ್ಯೆ ಇದ್ದರೂ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ಆಸೆ. ಆ ಬಗ್ಗೆ ತಮಿಳುನಾಡು ಸರ್ಕಾರದ ಗಮನಕ್ಕೂ ತರುತ್ತೇವೆ’ ಎಂದರು.